ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ 

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಸತತ ಏರಿಕೆ ಕಾಣುತ್ತಿದ್ದು, ಶುಕ್ರವಾರ ಮತ್ತೆ ತೈಲ ಬೆಲೆ ತಲಾ 35 ಪೈಸೆ ಏರಿಕೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಸತತ ಏರಿಕೆ ಕಾಣುತ್ತಿದ್ದು, ಶುಕ್ರವಾರ ಮತ್ತೆ ತೈಲ ಬೆಲೆ ತಲಾ 35 ಪೈಸೆ ಏರಿಕೆಯಾಗಿದೆ. 

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ದೇಶಾದ್ಯಂತ ಇಂಧನ ದರವನ್ನು ಸತತವಾಗಿ ಹೆಚ್ಚಳ ಮಾಡುತ್ತಾ ಬಂದಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ 112 ರೂಪಾಯಿ 78 ಪೈಸೆಯಾಗಿದ್ದು, ಡೀಸೆಲ್ ಬೆಲೆ 103 ರೂಪಾಯಿ 63 ಪೈಸೆಯಾಗಿದೆ.

ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 106 ರೂಪಾಯಿ 89 ಪೈಸೆ ಮತ್ತು ಡೀಸೆಲ್ ಬೆಲೆ 95 ರೂಪಾಯಿ 62 ಪೈಸೆಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 107 ರೂಪಾಯಿ 45 ಪೈಸೆ, 98 ರೂಪಾಯಿ 73 ಪೈಸೆಯಾಗಿದೆ. ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ 103 ರೂಪಾಯಿ 92 ಪೈಸೆ ಮತ್ತು 99 ರೂಪಾಯಿ 92 ಪೈಸೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 110 ರೂಪಾಯಿ 61 ಪೈಸೆಯಾದರೆ, ಪ್ರತೀ ಲೀಟರ್ ಡೀಸೆಲ್ ದರ 101 ರೂಪಾಯಿ 49 ಪೈಸೆಗೆ ಏರಿಕೆಯಾಗಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಬಡವರ ಕೈಗೆ ಎಟುಕದಂತಾಗಿದೆ. ಈಗಾಗಲೇ ಎಲ್​ಪಿಜಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನ ದಿನನಿತ್ಯ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com