ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ...

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ.  ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ.  ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ.

ಇಂದೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳವಾಗಿದ್ದು, ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟಿದೆ...

ಬೆಲೆ ಏರಿಕೆಯೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.32 ರೂಪಾಯಿ ಇದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.46 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.38 ರೂಪಾಯಿಗೆ ಏರಿಕೆ ಆಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.43 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.52 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.59 ರೂಪಾಯಿ ಇದೆ.

ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.23 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 111.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.08 ರೂಪಾಯಿ ನಿಗದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com