ಸತತ 2 ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್; ಡೀಸೆಲ್​​ ಬೆಲೆಯಲ್ಲಿ ಮತ್ತೆ ಏರಿಕೆ: ಇಂದಿನ ದರ ಇಂತಿದೆ...

ಸತತ 2 ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಬುಧವಾರ ಮತ್ತೆ ಏರಿಕೆ ಕಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಸತತ 2 ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಬುಧವಾರ ಮತ್ತೆ ಏರಿಕೆ ಕಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 108ರ ಸಮೀಪಕ್ಕೆ ತಲುಪಿದೆ. ಇತ್ತೀಚಿಗಿನ ಬೆಲೆ ಏರಿಕೆಯ ಬಳಿಕ ಪೆಟ್ರೋಲ್​ ಬೆಲೆಯೊಂದೇ ಅಲ್ಲ ಲೀಟರ್​ ಡೀಸೆಲ್​ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ.

ಇಂದಿನ ದರ ಹೆಚ್ಚಳದ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 107.94 ರೂಪಾಯಿ ನಿಗದಿಯಾಗಿದೆ. ಇನ್ನು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.80 ರೂಪಾಯಿ ದಾಖಲಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.46 ರೂಪಾಯಿ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.83 ರೂಪಾಯಿ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೂ. 111.70 ಏರಿಕೆಯಾಗಿದೆ.

ಇನ್ನು ಡೀಸೆಲ್ ದರವನ್ನು ಗಮನಿಸಿದರೆ ದೆಹಲಿಯಲ್ಲಿ ಲೀಟರ್ ಡೀಸೆಲ್ ದರ 96.67 ರೂಪಾಯಿ ನಿಗದಿಯಾಗಿದೆ. ಮುಂಬೈನಲ್ಲಿ ಲೀಟರ್ ಡೀಸೆಲ್ ದರ 104.75 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಡೀಸೆಲ್ ದರ 100.92 ರೂಪಾಯಿ. ಕೋಲ್ಕತ್ತಾದಲ್ಲಿ ಲೀಟರ್ ಡೀಸೆಲ್ ದರ 99.78 ರೂಪಾಯಿ ಹಾಗೂ ಬೆಂಗಳೂರಿನಲ್ಲಿ ರೂ.102.60ಗೆ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com