ಮತ್ತೆ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ: ಇಂದಿನ ದರ ಪಟ್ಟಿ ಇಂತಿದೆ

ಗುರುವಾರ ಮತ್ತೆ ಪೆಟ್ರೋಲ್ -ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಗುರುವಾರ ಮತ್ತೆ ಪೆಟ್ರೋಲ್ -ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 108.2ಕ್ಕೆ  ಮತ್ತು ಡೀಸೆಲ್ ದರ 97.03ಕ್ಕೆ ಏರಿಕೆಯಾಗಿದೆ.  

ಇನ್ನು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 114.1 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 105.08ರೂ ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.75 ರೂಗೆ ಮತ್ತು ಡೀಸೆಲ್ ದರ ಪ್ರತೀ ಲೀಟರ್ ಗೆ 100.1ರೂಗೆ ಏರಿಕೆಯಾಗಿದೆ. 

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.1 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 101.22ರೂಗೆ ಏರಿಕೆಯಾಗಿದೆ.  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ರೂ. 112.02ಗೆ ಮತ್ತು ಡೀಸೆಲ್ ದರ 102.94ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com