ಕರ್ನಾಟಕ ಸೇರಿ 17 ರಾಜ್ಯಗಳಿಗೆ 9,871 ಕೋಟಿ ರೂ. ಅನುದಾನ ಬಿಡುಗಡೆ: ಕೇಂದ್ರ ಹಣಕಾಸು ಸಚಿವಾಲಯ

ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871 ಕೋಟಿ ರೂ.ಗಳ ನಂತರದ ವಿತರಣಾ ಆದಾಯ ಕೊರತೆಯ(ಪಿಡಿಆರ್‌ಡಿ) ಅನುದಾನದ ಆರನೇ ಮಾಸಿಕ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ 9,871 ಕೋಟಿ ರೂ.ಗಳ ನಂತರದ ವಿತರಣಾ ಆದಾಯ ಕೊರತೆಯ(ಪಿಡಿಆರ್‌ಡಿ) ಅನುದಾನದ ಆರನೇ ಮಾಸಿಕ ಕಂತನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಈ ಕಂತಿನ ಬಿಡುಗಡೆಯೊಂದಿಗೆ, ಪ್ರಸ್ತುತ ಹಣಕಾಸು ವರ್ಷದಲ್ಲಿ ಪಿಡಿಆರ್‌ಡಿ ಅನುದಾನವಾಗಿ ಅರ್ಹ ರಾಜ್ಯಗಳಿಗೆ ಒಟ್ಟು 59,226 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಸಂವಿಧಾನದ ಪರಿಚ್ಛೇದ 275ರ ಅಡಿಯಲ್ಲಿ ರಾಜ್ಯಗಳಿಗೆ ಈ ಅನುದಾನವನ್ನು ಒದಗಿಸಲಾಗಿದೆ.

2021-22ರ ಅವಧಿಯಲ್ಲಿ 17 ರಾಜ್ಯಗಳ ಕಂದಾಯ ಖಾತೆಗಳಲ್ಲಿನ ಅಂತರವನ್ನು ಪೂರೈಸಲು ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ ಮಾಸಿಕ ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
ಈ ಅನುದಾನವನ್ನು ಪಡೆಯಲು ರಾಜ್ಯಗಳ ಅರ್ಹತೆ ಮತ್ತು ಅನುದಾನದ ಪ್ರಮಾಣವನ್ನು ಆಯೋಗವು 2021-22ರ ಆರ್ಥಿಕ ವರ್ಷದ ಮೌಲ್ಯಮಾಪನ ಮಾಡಿದ ನಂತರ ರಾಜ್ಯಗಳ ಆದಾಯ ಮತ್ತು ವೆಚ್ಚದ ಮೌಲ್ಯಮಾಪನದ ನಡುವಿನ ಅಂತರವನ್ನು ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಹದಿನೈದನೆಯ ಹಣಕಾಸು ಆಯೋಗವು 2021-22 ರ ಆರ್ಥಿಕ ವರ್ಷದಲ್ಲಿ 17 ರಾಜ್ಯಗಳಿಗೆ ಒಟ್ಟು 1,18,452 ಕೋಟಿ ರೂ.ಗಳ ನಂತರದ ಹಂಚಿಕೆ ಕಂದಾಯ ಕೊರತೆಯ ಅನುದಾನವನ್ನು ಶಿಫಾರಸು ಮಾಡಿದೆ. ಈ ಪೈಕಿ ರೂ. 59,226 ಕೋಟಿ (ಶೇ.50) ಮೊತ್ತವನ್ನು ಬಿಡುಗಡೆ ಮಾಡಲಾಗಿದೆ 'ಎಂದು ಹಣಕಾಸು ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಹದಿನೈದನೆಯ ಹಣಕಾಸು ಆಯೋಗವು ಪಿಡಿಆರ್‌ಡಿ ಅನುದಾನಕ್ಕೆ ಶಿಫಾರಸು ಮಾಡಿದ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಪಶ್ಚಿಮ ಬಂಗಾಳ ಮತ್ತು ಮೇಘಾಲಯ ಸೇರಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com