ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಡಿಸೆಂಬರ್ 31 ರವರೆಗೆ ವಿಸ್ತರಣೆ

2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.

ಈ ಹಿಂದೆ ಐಟಿ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಈಗ ಅದನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

"ತೆರಿಗೆದಾರರ ಸಂಕಷ್ಟಗಳನ್ನು ಪರಿಗಣಿಸಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(CBDT) 2021-22 ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಮತ್ತು ವಿವಿಧ ಲೆಕ್ಕಪರಿಶೋಧನೆಯ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕಗಳನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಿದೆ "ಎಂದು ಹಣಕಾಸು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಯ ತೆರಿಗೆ ಇಲಾಖೆ  1961 ರ ಕಾಯ್ದೆ ಅಡಿಯಲ್ಲಿ( AY 2021-22) ಆದಾಯ ತೆರಿಗೆ ರಿಟರ್ನ್ಸ್ (ITRs) ಮತ್ತು ಆಡಿಟ್ ವರದಿಗಳನ್ನು ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ.  ತೆರಿಗೆದಾರರು ಸೂಚಿಸಿದ  ಸಮಸ್ಯೆಗಳನ್ನು ಪರಿಗಣಿಸಿ, CBDT ಯು AY 21-22 ಗೆ ITR ಗಳು ಮತ್ತು ಆಡಿಟ್ ವರದಿಗಳನ್ನು ಸಲ್ಲಿಸಲು ಅಂತಿಮ ದಿನಾಂಕಗಳನ್ನು ವಿಸ್ತರಿಸುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com