ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 400 ಮಂದಿಗೆ ಉದ್ಯೋಗ: ಖಾಸಗಿ ಬ್ಯಾಂಕುಗಳಲ್ಲಿ 17,000 ಮಂದಿಗೆ ಉದ್ಯೋಗ ನೇಮಕಾತಿ

ಈ ಬೆಳವಣಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಎಂದು ಹೇಳಬೇಕಾಗುತ್ತದೆ. ಏಕೆಂದರೆ ಕಳೆದ ವರ್ಷ 38,000 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ ಅತಿ ದೊಡ್ಡ ಉದ್ಯೋಗದಾತ ಕ್ಷೇತ್ರ ಎಂಬ ಖ್ಯಾತಿಗೆ ಪಾತ್ರವಾಗಿರುವ ಬ್ಯಾಂಕಿಂಗ್ ಕ್ಷೇತ್ರ ಈ ಬಾರಿ ನಿರಾಸೆ ಮೂಡಿಸಿದೆ. ಸಮಗ್ರ ಬ್ಯಾಂಕಿಂಗ್ ಕ್ಷೇತ್ರವನ್ನು ಗಣನೆಗೆ ತೆಗೆದುಕೊಂಡರೆ ಅತಿ ಹೆಚ್ಚು ಮಂದಿಗೆ ಉದ್ಯೋಗ ನೀಡುತ್ತಿದ್ದ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳು 2021 ಹಣಕಾಸು ವರ್ಷದಲ್ಲಿ ಕೇವಲ 400 ಮಂದಿಗೆ ಉದ್ಯೋಗ ನೀಡಿವೆ.

ಆರ್ ಬಿ ಐ ಬಿಡುಗಡೆಗೊಳಿಸಿರುವ ಅಂಕಿಅಂಶಗಳಿಂದ ಈ ಮಾಹಿತಿ ಹೊರಬಿದ್ದಿದೆ. ಆದರೆ ಈ ಬೆಳವಣಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಎಂದು ಹೇಳಬೇಕಾಗುತ್ತದೆ. ಏಕೆಂದರೆ ಕಳೆದ ವರ್ಷ 38,000 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು. 2019ರಲ್ಲಿ 8 ಲಕ್ಷ ಮಂದಿಗೆ ಉದ್ಯೋಗ ನೀಡಲಾಗಿತ್ತು ಎನ್ನುವುದು ಗಮನಾರ್ಹ.

ಇದೇ ವೇಳೆ ಖಾಸಗಿ ಬ್ಯಾಂಕಿಂಗ್ ವಲಯದಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ 17,000 ಮಂದಿಗೆ ಉದ್ಯೋಗ ನೀಡಿದೆ. ಕಳೆದ ವರ್ಷ 50,000 ಮಂದಿಯನ್ನು ಉದ್ಯೋಗ ಮಾಡಿಕೊಳ್ಲಲಾಗಿತ್ತು. ಈ ಬಾರಿ ಉದ್ಯೋಗ ನೇಮಕಾತಿಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಆದರೆ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳೀಗೆ ಹೋಲಿಸಿದಲ್ಲಿ ಈ ಸಂಖ್ಯೆ ಹೆಚ್ಚಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com