ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.

ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಜುಲೈ 06 ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇಂದಿನಿಂದ 14.2 ಕೆಜಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರು ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿವೆ.

ದೆಹಲಿಯಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್‌ ದರ 1,053ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 14.2 ಕೆ.ಜಿ ತೂಕದ ಸಿಲಿಂಡರ್‌ ದರ  1,005.50 ರಷ್ಟಿತ್ತು. ಇನ್ನು ಮುಂದೆ 1055.50 ಆಗಲಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ದರ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಸಬ್ಸಿಡಿಯೇತರ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,053ಕ್ಕೆ ತಲುಪಿದೆ.

ಇದೇ ವೇಳೆ 5ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ಕೂಡಾ ಪರಿಷ್ಕರಿಸಲಾಗಿದ್ದು, 18 ರು. ಏರಿಕೆ ಕಂಡಿದೆ. 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 8.5 ರು ಪ್ರತಿ ಸಿಲಿಂಡರ್ ನಂತೆ ಇಳಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com