ಟಿ20 ವಿಶ್ವಕಪ್: ಭಾರತದ ಪಂದ್ಯಗಳು ಐನಾಕ್ಸ್ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ
ಮುಂಬೈ: ಕೆಲವೇ ದಿನಗಳಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಆರಂಭವಾಗಲಿದ್ದು, ಪ್ರಮುಖ ಮಲ್ಟಿಪ್ಲೆಕ್ಸ್ ಐನಾಕ್ಸ್ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದು ನೀಡಿದೆ. ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ದೇಶಾದ್ಯಂತ ಇರುವ ಐನಾಕ್ಸ್ ಚಿತ್ರ ಮಂದಿರಗಳಲ್ಲಿ ನೇರ ಪ್ರಸಾರವಾಗಲಿವೆ.
ಈ ಸಂಬಂಧ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಜೊತ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಐಎನ್‌ಎಕ್ಸ್ ಲೀಸರ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಐನಾಕ್ಸ್ ಟೀಮ್ ಇಂಡಿಯಾ ಆಡಲಿರುವ ಎಲ್ಲಾ ಗ್ರೂಪ್ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ. ಭಾರತ ಅಕ್ಟೋಬರ್ 23 ರಂದು ಪಾಕಿಸ್ತಾನದ ವಿರುದ್ಧ ಮೊದಲ ಪಂದ್ಯ ಆಡಲಿದೆ. ಅಂದಿನಿಂದ ಸೆಮಿಫೈನಲ್ ಮತ್ತು ಅಂತಿಮ ಪಂದ್ಯವನ್ನೂ ನೇರ ಪ್ರಸಾರ ಮಾಡುವುದಾಗಿ ಐನಾಕ್ಸ್ ತಿಳಿಸಿದೆ.
"ದೇಶದ 25 ಕ್ಕೂ ಹೆಚ್ಚು ನಗರಗಳಲ್ಲಿ ಐನಾಕ್ಸ್ ಮಲ್ಟಿಪ್ಲೆಕ್ಸ್‌ಗಳಲ್ಲಿ ಪಂದ್ಯಗಳನ್ನು ಪ್ರದರ್ಶಿಸಲಾಗುತ್ತದೆ" ಎಂದು ಅದು ಹೇಳಿದೆ.
ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಎಂಟನೇ ಆವೃತ್ತಿಯು ಅಕ್ಟೋಬರ್ 16 ರಿಂದ ಪ್ರಾರಂಭವಾಗುತ್ತಿದ್ದು ಸೂಪರ್ 12 ರ ಹಂತವು ಅಕ್ಟೋಬರ್ 22 ರಂದು ಆರಂಭವಾಗಲಿದೆ. ಫೈನಲ್ ಪಂದ್ಯವನ್ನು ನವೆಂಬರ್ 13 ರಂದು ಮೆಲ್ಬೋರ್ನ್‌ನಲ್ಲಿ ನಿಗದಿಪಡಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ