ನಿರ್ಲಕ್ಷ್ಯ ತೋರುವ ಇವಿ ಕಂಪನಿಗಳಿಗೆ ದಂಡ; ದೋಷಪೂರಿತ ವಾಹನಗಳ ಹಿಂದಕ್ಕೆ ಪಡೆಯಿರಿ: ನಿತಿನ್ ಗಡ್ಕರಿ ಎಚ್ಚರಿಕೆ
ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಇವಿ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ.
Published: 22nd April 2022 01:11 PM | Last Updated: 22nd April 2022 02:27 PM | A+A A-

ಕೇಂದ್ರ ಸಚಿವ ನಿತಿನ್ ಗಡ್ಕರಿ
ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಇವಿ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ.
Several mishaps involving Electric Two Wheelers have come to light in last two months. It is most unfortunate that some people have lost their lives and several have been injured in these incidents.
— Nitin Gadkari (@nitin_gadkari) April 21, 2022
ಈ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದು, 'ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗುರುವಾರ ಎಚ್ಚರಿಸಿದ್ದಾರೆ.
We have constituted an Expert Committee to enquire into these incidents and make recommendations on remedial steps.
— Nitin Gadkari (@nitin_gadkari) April 21, 2022
Based on the reports, we will issue necessary orders on the defaulting companies. We will soon issue quality-centric guidelines for Electric Vehicles.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ ಭಾರೀ ದಂಡವನ್ನು ವಿಧಿಸಲಾಗುತ್ತದೆ. ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಬೇಕಾಗುತ್ತದೆ. ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಬದ್ಧವಾಗಿರಲಿದೆ. ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.
If any company is found negligent in their processes, a heavy penalty will be imposed and a recall of all defective vehicles will also be ordered.
— Nitin Gadkari (@nitin_gadkari) April 21, 2022
ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಹಲವು ಅವಘಡಗಳು ಕಳೆದ ಎರಡು ತಿಂಗಳುಗಳಲ್ಲಿ ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿರುವುದು ಮತ್ತು ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ’ ಎಂದೂ ಸಚಿವರು ಹೇಳಿದರು.
ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸದಂತೆ ತಡೆಯಲು/ ಶಿಫಾರಸುಗಳನ್ನು ಮಾಡಲು ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ತಜ್ಞರ ತಂಡವನ್ನು ರಚಿಸಿದೆ.
Meanwhile companies may take advance action to Recall all defective batches of vehicles immediately. Under the leadership of PM Shri @narendramodi ji, our government is committed to ensure safety of each and every commuter.
— Nitin Gadkari (@nitin_gadkari) April 21, 2022
ಕಳೆದ ತಿಂಗಳು ಪುಣೆಯಲ್ಲಿ ರೈಡ್-ಹೇಲಿಂಗ್ ಆಪರೇಟರ್ ಓಲಾ ಅವರ ಎಲೆಕ್ಟ್ರಿಕ್ ಮೊಬಿಲಿಟಿ ಆರ್ಮ್ ಬಿಡುಗಡೆ ಮಾಡಿದ ಇ-ಸ್ಕೂಟರ್ಗೆ ಬೆಂಕಿ ಹೊತ್ತಿಕೊಂಡ ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು. ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ಬೆಂಕಿ ಸ್ಫೋಟಕ ಮತ್ತು ಪರಿಸರ ಸುರಕ್ಷತೆ ಕೇಂದ್ರವನ್ನು ಕೇಳಲಾಗಿದೆ.