ತಗ್ಗಿದ ಆಹಾರ ಪದಾರ್ಥಗಳ ಬೆಲೆ; ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ. 6.71ಕ್ಕೆ ಇಳಿಕೆ

ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು  ಶೇ. 6.71 ಇಳಿಕೆಯಾಗಿದೆ. ಇದು ಮಾರ್ಚ್ ನಂತರದ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು  ಶೇ. 6.71 ಇಳಿಕೆಯಾಗಿದೆ. ಇದು ಮಾರ್ಚ್ ನಂತರದ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.

ಕಳೆದ ಜೂನ್‌ನಲ್ಲಿ, ಚಿಲ್ಲರೆ ಹಣದುಬ್ಬರವು ಶೇಕಡಾ 7.01 ರಷ್ಟಿತ್ತು ಮತ್ತು ಜುಲೈ 2021 ರಲ್ಲಿ ಇದು ಶೇಕಡಾ 5.59 ರಷ್ಟಿತ್ತು.

ಸರ್ಕಾರಿ ಅಂಕಿ ಅಂಶಗಳ ಪ್ರಕಾರ, ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇಕಡಾ 7.75 ರಷ್ಟು ಇತ್ತು. ಇದು ಜುಲೈ 2022 ರಲ್ಲಿ  ಶೇಕಡಾ 6.75 ಕ್ಕೆ ಇಳಿಕೆಯಾಗಿದೆ.

ಗ್ರಾಹಕ ಬೆಲೆ ಸೂಚ್ಯಂಕ(CPI) ಆಧಾರಿತ ಚಿಲ್ಲರೆ ಹಣದುಬ್ಬರವು ಜುಲೈ ತಿಂಗಳಲ್ಲಿ ಶೇ. 6.71ಕ್ಕೆ ಇಳಿದರೂ ಭಾರತೀಯ ರಿಸರ್ವ್ ಬ್ಯಾಂಕ್‌ನ ಗುರಿಯ ಮೇಲಿನ ಮಿತಿಯನ್ನು ಮೀರಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕಿಂತ ಹೆಚ್ಚಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com