ಅಕ್ರಮ ಹಣ ವರ್ಗಾವಣೆ ಕೇಸು: ಎನ್ಎಸ್ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾ

ಅಕ್ರಮವಾಗಿ ಫೋನ್ ಕದ್ದಾಲಿಕೆ ಮತ್ತು ರಾಷ್ಟ್ರೀಯ ಷೇರು ವಿನಿಮಯ(NSE) ಉದ್ಯೋಗಿಗಳ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ಚಿತ್ರಾ ರಾಮಕೃಷ್ಣ
ಚಿತ್ರಾ ರಾಮಕೃಷ್ಣ

ನವದೆಹಲಿ: ಅಕ್ರಮವಾಗಿ ಫೋನ್ ಕದ್ದಾಲಿಕೆ ಮತ್ತು ರಾಷ್ಟ್ರೀಯ ಷೇರು ವಿನಿಮಯ(NSE) ಉದ್ಯೋಗಿಗಳ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಜಾಮೀನು ನಿರಾಕರಿಸಿ ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇಂದು ವಿಚಾರಣೆಯ ಸಮಯದಲ್ಲಿ, ಜಾರಿ ನಿರ್ದೇಶನಾಲಯ ಚಿತ್ರಾ ರಾಮಕೃಷ್ಣ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತು, ಈ ವಿಷಯದಲ್ಲಿ ತನಿಖೆ ನಡೆಯುತ್ತಿದ್ದು, ಮಾಜಿ ಅಧಿಕಾರಿ ಚಿತ್ರಾ ಅವರು, ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದರು.

2009 ರಿಂದ 2017ರವರೆಗೆ ಮಾಜಿ ಎನ್‌ಎಸ್‌ಇ ಸಿಇಒ ರವಿ ನಾರಾಯಣ್, ರಾಮಕೃಷ್ಣ, ಕಾರ್ಯನಿರ್ವಾಹಕ ಉಪಾಧ್ಯಕ್ಷ ರವಿ ವಾರಣಾಸಿ, ಮಹೇಶ್ ಹಳದೀಪುರ್ ಮತ್ತು ಇತರರು ಎನ್‌ಎಸ್‌ಇ ಮತ್ತು ಅದರ ಉದ್ಯೋಗಿಗಳನ್ನು ವಂಚಿಸಲು ಸಂಚು ರೂಪಿಸಿದ್ದರು ಎಂದು ಇಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್‌ಕೆ ಮಟ್ಟಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎನ್‌ಎಸ್‌ಇಯ ಸೈಬರ್ ದೋಷಗಳ ಆವರ್ತಕ ಅಧ್ಯಯನದ ನೆಪದಲ್ಲಿ ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ತಡೆಹಿಡಿಯಲು iSEC ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com