2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಶೇ 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್

ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್‌ ಶೇ 6.9 ಕ್ಕೆ ಮಂಗಳವಾರ ಹೆಚ್ಚಿಸಿದೆ. ಈ ಮೊದಲು ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: 2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್‌ ಶೇ 6.9ಕ್ಕೆ ಮಂಗಳವಾರ ಹೆಚ್ಚಿಸಿದೆ. ಈ ಮೊದಲು ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.

ವಿಶ್ವಬ್ಯಾಂಕ್‌ನ ಇಂಡಿಯಾ ಡೆವಲಪ್‌ಮೆಂಟ್ ಅಪ್‌ಡೇಟ್ ವರದಿ ಬಿಡುಗಡೆ ಮಾಡಿದ್ದು, ಭಾರತವು ಅಮೆರಿಕ, ಯುರೋಪಿಯನ್ ಒಕ್ಕೂಟ ಮತ್ತು ಚೀನಾದ ಆರ್ಥಿಕತೆಯಿಂದ ಪ್ರಭಾವಿತವಾಗಿದೆ ಎಂದು ಹೇಳಿದೆ.

ಆದಾಗ್ಯೂ, 2022-23ರ ಆರ್ಥಿಕ ವರ್ಷದಲ್ಲಿ ಜಿಡಿಪಿಯ ಶೇ 6.4 ರಷ್ಟು ವಿತ್ತೀಯ ಕೊರತೆಯ ಗುರಿಯನ್ನು ಸರ್ಕಾರವು ಪೂರೈಸಿದೆ.

ಅಲ್ಲದೆ, ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಹಣದುಬ್ಬರ ಪ್ರಮಾಣ ಶೇಕಡಾ 7.1ರಷ್ಟಿರಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. ದೇಶದಲ್ಲಿ ಸುಮಾರು ಒಂದು ವರ್ಷದಿಂದ ಚಿಲ್ಲರೆ ಹಣದುಬ್ಬರ ಪ್ರಮಾಣ ಸಹನೆಯ ಮಟ್ಟವಾದ ಶೇಕಡಾ 6ಕ್ಕಿಂತ ಮೇಲ್ಮಟ್ಟದಲ್ಲಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟಾರೆಯಾಗಿ ಶೇ 6.8ರಿಂದ ಶೇ 7ರಷ್ಟು ಬೆಳವಣಿಗೆ ಸಾಧಿಸುವ ಹಾದಿಯಲ್ಲಿ ಅರ್ಥ ವ್ಯವಸ್ಥೆ ಇದೆ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಕಳೆದ ವಾರ ಹೇಳಿದ್ದಾರೆ.

‘ಪರ್ಚೇಸಿಂಗ್ ಮ್ಯಾನೇಜರ್ಸ್‌ ಇಂಡೆಕ್ಸ್, ಬ್ಯಾಂಕ್‌ಗಳು ಸಾಲ ನೀಡುವುದರಲ್ಲಿ ಕಾಣುತ್ತಿರುವ ಬೆಳವಣಿಗೆ ಮತ್ತು ವಾಹನಗಳ ಮಾರಾಟಕ್ಕೆ ಸಂಬಂಧಿಸಿದ ಅಂಕಿ–ಅಂಶಗಳು ಅರ್ಥ ವ್ಯವಸ್ಥೆಯು ಬೆಳವಣಿಗೆಯ ವೇಗವನ್ನು ಕಾಯ್ದುಕೊಂಡಿದೆ ಎಂಬುದನ್ನು ಹೇಳುತ್ತಿವೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com