ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಬಳದಲ್ಲಿ ಶೇ.88 ರಷ್ಟು ಏರಿಕೆ, ವರ್ಷಕ್ಕೆ 79.75 ಕೋಟಿ ರೂ.!
ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ ಸಂಬಳದಲ್ಲಿ ಭಾರೀ ಏರಿಕೆಯಾಗಿದೆ. ಈ ವರ್ಷ ತಮ್ಮ ವೇತನವನ್ನು ಶೇ. 88 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದರೊಂದಿಗೆ ಪರೇಖ್ ಇದೀಗ ವರ್ಷಕ್ಕೆ 79.75 ಕೋಟಿ ರೂ. ಪಡೆಯುತ್ತಾರೆ.
Published: 26th May 2022 10:16 PM | Last Updated: 27th May 2022 01:30 PM | A+A A-

ಸಲೀಲ್ ಪರೇಖ್
ನವದೆಹಲಿ: ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ ಸಂಬಳದಲ್ಲಿ ಭಾರೀ ಏರಿಕೆಯಾಗಿದೆ. ಈ ವರ್ಷ ತಮ್ಮ ವೇತನವನ್ನು ಶೇ.88 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದರೊಂದಿಗೆ ಪರೇಖ್ ಇದೀಗ ವರ್ಷಕ್ಕೆ 79.75 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.
ಜುಲೈ 1 ರಿಂದ ಎರಡನೇ ಅವಧಿಗೆ ಪರೇಖ್ ಅವರನ್ನು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕವಾದ ಬೆನ್ನಲ್ಲೇ, ಅವರ ಸಂಬಳದಲ್ಲಿ ಹೆಚ್ಚಳ ಮಾಡಲಾಗಿದೆ. ಗುರುವಾರ ಬಿಡುಗಡೆಯಾದ ಕಂಪನಿಯ ವಾರ್ಷಿಕ ವರದಿ ಪ್ರಕಾರ 58 ವರ್ಷದ ಪರೇಖ್ ಮಾರ್ಚ್ 31,2022ಕ್ಕೆ ಕೊನೆಯಾದ ಆರ್ಥಿಕ ವರ್ಷದಲ್ಲಿ 71.02 ಕೋಟಿ ಸಂಬಳ ಪಡೆಯುತ್ತಿದ್ದಾರೆ.ಇದರಲ್ಲಿ ಅವರಿಗೆ ನಿರ್ಬಂಧಿತ ಸ್ಟಾಕ್ ಯೂನಿಟ್‌ಗಳಿಂದಲೇ 52.33 ಕೋಟಿ ಬಂದಿದೆ.
ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಅವರು ಕಂಪನಿಗೆ ಸಲ್ಲಿಸಿದ ಸೇವೆಗಳಿಗೆ ಯಾವುದೇ ಸಂಭಾವನೆ ಪಡೆಯದಿರಲು ಸ್ವಯಂಪ್ರೇರಣೆಯಿಂದ ನಿರ್ಧರಿಸಿದ್ದಾರೆ. ಸಂಸ್ಥೆಯು ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಬೆಳವಣಿಗೆಯನ್ನು ಉಲ್ಲೇಖಿಸಿ ಪರೇಖ್ ಅವರ ಸಂಬಳವನ್ನು ಹೆಚ್ಚಳ ಮಾಡಲಾಗಿದೆ ಎಂದು ಷೇರುದಾರರಿಗೆ ನೀಡಿರುವ ನೋಟಿಸ್ ನಲ್ಲಿ ಸಮರ್ಥಿಸಿಕೊಳ್ಳಲಾಗಿದೆ.