ಟ್ವಿಟರ್ ಹಾದಿಯಲ್ಲಿ ಫೇಸ್ ಬುಕ್; ಬೃಹತ್ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದು?

ಟ್ವಿಟರ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೆ ಮತ್ತೊಂದು ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಸಹ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಫೇಸ್ ಬುಕ್
ಫೇಸ್ ಬುಕ್

ನ್ಯೂಯಾರ್ಕ್: ಟ್ವಿಟರ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೆ ಮತ್ತೊಂದು ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಸಹ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಮುಖ ಟೆಕ್ನಾಲಜಿ ವಿಭಾಗದಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತ ಈ ವಾರ ಘೋಷಣೆಯಾಗಬಹುದು ಎಂದು ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ.

ವಾಲ್ ಸ್ಟ್ರೀಟ್ ಜರ್ನಲ್ ಈ ಬಗ್ಗೆ ವರದಿ ಪ್ರಕಟಿಸಿದ್ದು, 87,000ಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಮೆಟಾ ಹಲವು ಸಾವಿರ ನೌಕರರನ್ನು ಉದ್ಯೋಗದಿಂದ ತೆಗೆದುಹಾಕಲಿದೆ ಎಂದು ಅಂದಾಜಿಸಿದೆ. 

ಸಂಸ್ಥೆಯ ಅಧಿಕಾರಿಗಳು ಉದ್ಯೋಗಿಗಳಿಗೆ ಅಗತ್ಯವಿಲ್ಲದ ಪ್ರಯಾಣವನ್ನು ಈ ವಾರದ ಪ್ರಾರಂಭದಲ್ಲಿ ರದ್ದುಗೊಳಿಸುವಂತೆ ಸೂಚಿಸಿದ್ದಾರೆ ಎಂದು ಹೆಳಲಾಗಿದೆ.

ಸಂಸ್ಥೆಯ 18 ವರ್ಷಗಳ ಇತಿಹಾಸದಲ್ಲಿ ಈ ಬಾರಿ ಅತಿ ಹೆಚ್ಚು ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕುವ ಸಾಧ್ಯತೆ ಇದ್ದು, ಇದಕ್ಕೆ ಪೂರಕವೆಂಬಂತೆ ಮಾರ್ಕ್ ಜುಕರ್ಬರ್ಗ್ ಸಹ ಸಂಸ್ಥೆ ಸಣ್ಣ ಪ್ರಮಾಣದ ಹೆಚ್ಚಿನ ಆದ್ಯತೆಯ ಬೆಳವಣಿಗೆ ಪ್ರದೇಶಗಳೆಡೆಗೆ ಹೆಚ್ಚು ಗಮನ ಹರಿಸಲಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com