ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಚಿಂತನೆ: ವರದಿ

ಅಮೆಜಾನ್ ಈ ವಾರದಿಂದಲೇ ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಸಂಬಂಧಿ ಉದ್ಯೋಗದಲ್ಲಿರುವ ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದೆ. ಕಂಪೆನಿಯ ಇತಿಹಾಸದಲ್ಲಿ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಅಮೆಜಾನ್(Amazon) ಈ ವಾರದಿಂದಲೇ ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಸಂಬಂಧಿ ಉದ್ಯೋಗದಲ್ಲಿರುವ ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದೆ. ಕಂಪೆನಿಯ ಇತಿಹಾಸದಲ್ಲಿ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. 

ಅಮೆಜಾನ್ ಕಂಪೆನಿಯ ಸಾಧನಗಳ ವಿಭಾಗ, ವಾಯ್ಸ್ ಸಹಾಯಕ ಅಲೆಕ್ಸಾ, ಚಿಲ್ಲರೆ ವಿಭಾಗ ಮತ್ತು ಮಾನವ ಸಂಪನ್ಮೂಲ ವಿಭಾಗದಿಂದ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಯೋಜನೆಯಿದೆ ಎಂದು ಹೆಸರು ಹೇಳಲು ಇಚ್ಛಿಸದ ಮೂಲಗಳಿಂದ ಮಾಹಿತಿ ಸಿಕ್ಕಿದೆ. 

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಎಷ್ಟು ಮಂದಿಯನ್ನು ಉದ್ಯೋಗದಿಂದ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆ  ನಿಖರವಾಗಿ ತಿಳಿದುಬಂದಿಲ್ಲ. ಆದರೆ ಸುಮಾರು 10 ಸಾವಿರ ಉದ್ಯೋಗಿಗಳನ್ನು ತೆಗೆದುಹಾಕಲಾಗುತ್ತದೆ. ಅದು ಅಮೆಜಾನ್‌ನ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಸರಿಸುಮಾರು 3 ಶೇಕಡಾವನ್ನು ಪ್ರತಿನಿಧಿಸುತ್ತದೆ ಮತ್ತು ಅದರ ಜಾಗತಿಕ ಉದ್ಯೋಗಿಗಳ 1.5 ಮಿಲಿಯನ್‌ಗಿಂತಲೂ ಅಧಿಕ ಉದ್ಯೋಗಿಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆಯಿರುತ್ತದೆ.

ಅಮೆಜಾನ್, ಉದ್ಯೋಗಿಗಳನ್ನು ವಜಾಗೊಳಿಸುವ ಇತ್ತೀಚಿನ ತಂತ್ರಜ್ಞಾನ ಕಂಪನಿಯಾಗಲಿದೆ ಎಂದು ವರದಿ ಹೇಳಿದೆ, ಇದು ಇತ್ತೀಚೆಗೆ ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಹೋರಾಡುತ್ತಿತ್ತು. ಈ ವರ್ಷದ ಆರಂಭದಲ್ಲಿ, ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಟೆಕ್ ಕೆಲಸಗಾರರಿಗೆ ನಗದು ಪರಿಹಾರದ ಮಿತಿಯನ್ನು ದ್ವಿಗುಣಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com