ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಇದರೊಂದಿಗೆ ಈ ಆರ್ಥಿಕ ವರ್ಷದಲ್ಲಿ ಇದುವರೆಗೆ ಬಿಡುಗಡೆಯಾದ ಒಟ್ಟು ಮೊತ್ತವು 1.15 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ. ಈ ಪರಿಹಾರ ಬಿಡುಗಡೆಯೊಂದಿಗೆ ಕೇಂದ್ರ ಸರ್ಕಾರ ಈ ವರ್ಷ ಮಾರ್ಚ್ ಅಂತ್ಯದವರೆಗೆ ಸಂಗ್ರಹಿಸಬಹುದಾದ ಸಂಪೂರ್ಣ ಸೆಸ್ ಮೊತ್ತವನ್ನು ಮುಂಚಿತವಾಗಿ ಬಿಡುಗಡೆ ಮಾಡಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಜುಲೈ 1, 2017 ರಿಂದ ಜಾರಿಗೆ ಬರುವಂತೆ ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)  ಪರಿಚಯಿಸಲಾಯಿತು ಮತ್ತು ಐದು ವರ್ಷಗಳ ಅವಧಿಗೆ ಜಿಎಸ್‌ಟಿ ಅನುಷ್ಠಾನದ ಖಾತೆಯಲ್ಲಿ ಉಂಟಾಗುವ ಯಾವುದೇ ಆದಾಯದ ನಷ್ಟಕ್ಕೆ ಪರಿಹಾರದ ಭರವಸೆಯನ್ನು ರಾಜ್ಯಗಳಿಗೆ ಭರವಸೆ ನೀಡಲಾಗಿತ್ತು. ರಾಜ್ಯಗಳಿಗೆ ಪರಿಹಾರವನ್ನು ಒದಗಿಸಲು ಕೆಲವು ಸರಕುಗಳ ಮೇಲೆ ಸೆಸ್ ವಿಧಿಸಲಾಗುತ್ತದೆ ಮತ್ತು ಸಂಗ್ರಹಿಸಿದ ಸೆಸ್ ಮೊತ್ತವನ್ನು ಪರಿಹಾರ ನಿಧಿಗೆ ಜಮಾ ಮಾಡಲಾಗುತ್ತದೆ.

2022 ಅಕ್ಟೋಬರ್ ವರೆಗಿನ ಒಟ್ಟು ಸೆಸ್ ಸಂಗ್ರಹವು ಕೇವಲ 72,147 ಕೋಟಿ ರೂಪಾಯಿಗಳಾಗಿದ್ದು, ಉಳಿದ 43,515 ಕೋಟಿ ರೂಪಾಯಿಗಳನ್ನು ಕೇಂದ್ರವು ತನ್ನದೇ ಆದ ಸಂಪನ್ಮೂಲಗಳಿಂದ ಬಿಡುಗಡೆ ಮಾಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡಲು ಮತ್ತು  ಹಣಕಾಸು ವರ್ಷದಲ್ಲಿ  ತಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಬಂಡವಾಳದ ಮೇಲಿನ ವೆಚ್ಚವನ್ನುಯಶಸ್ವಿಯಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com