2023 ಡಿಸೆಂಬರ್ ಹೊತ್ತಿಗೆ ದೇಶಾದ್ಯಂತ 5ಜಿ ಸೇವೆ: ಮುಕೇಶ್ ಅಂಬಾನಿ

ಮುಂದಿನ ವರ್ಷ ಅಂದರೆ 2023ರ ಡಿಸೆಂಬರ್ ವೇಳೆಗೆ ದೇಶಾದ್ಯಂತ 5G ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಮುಕೇಶ್ ಅಂಬಾನಿ
ಮುಕೇಶ್ ಅಂಬಾನಿ

ನವದೆಹಲಿ: ಮುಂದಿನ ವರ್ಷ ಅಂದರೆ 2023ರ ಡಿಸೆಂಬರ್ ವೇಳೆಗೆ ದೇಶಾದ್ಯಂತ 5G ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಜಿಯೋ ಕೈಗೆಟುಕುವ ಕಡಿಮೆ ದರದಲ್ಲಿ 5G ಸೇವೆಗಳನ್ನು ಪ್ರಾರಂಭಿಸುತ್ತದೆ. ಇನ್ನು ಒಂದು ವರ್ಷದಲ್ಲಿ ದೇಶದ ಮೂಲೆಮೂಲೆಗಳಿಗೂ 5ಜಿ ಸೇವೆ ತಲುಪಿಸುತ್ತೇವೆ ಎಂದು ಹೇಳಿದ್ದಾರೆ. ಇಂದು ದೆಹಲಿಯಲ್ಲಿ 5ಜಿ ಟೆಲಿಕಾಂ ತಂತ್ರಜ್ಞಾನ ಸೇವೆಗೆ ಚಾಲನೆ ನೀಡಿದರು. ಜಿಯೋ ಈ ತಿಂಗಳೊಳಗೆ 5G ಸೇವೆಗಳನ್ನು ಹೊರತರಲು ವೇಗವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಗತಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಕೇಶ್ ಅಂಬಾನಿ ಹೇಳಿದರು.

5G ಸೇವೆ ಮುಂದಿನ ಪೀಳಿಗೆಯ ಸಂಪರ್ಕ ತಂತ್ರಜ್ಞಾನಕ್ಕಿಂತ ಹೆಚ್ಚಾಗಿದೆ. 5G ತಂತ್ರಜ್ಞಾನವು ಇತರ 21 ನೇ ಶತಮಾನದ ತಂತ್ರಜ್ಞಾನಗಳಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್, ರೋಬೋಟಿಕ್ಸ್, ಬ್ಲಾಕ್‌ಚೈನ್ ಮತ್ತು ಮೆಟಾವರ್ಸ್ ನ್ನು ಅನ್ಲಾಕ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಶ್ಲಾಘಿಸಿದರು. 

ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಮುಂಬೈನ ಶಾಲೆಯೊಂದರ ಶಿಕ್ಷಕರನ್ನು ಮಹಾರಾಷ್ಟ್ರ, ಗುಜರಾತ್ ಮತ್ತು ಒಡಿಶಾದ ಮೂರು ವಿಭಿನ್ನ ಸ್ಥಳಗಳಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ತೋರಿಸಲಾಯಿತು. 

ಇದರರ್ಥ, ಶಿಕ್ಷಕರನ್ನು ವಿದ್ಯಾರ್ಥಿಗಳಿಗೆ ಹತ್ತಿರ ತರುವ ಮೂಲಕ 5G ಶಿಕ್ಷಣವನ್ನು ಹೇಗೆ ಸುಗಮಗೊಳಿಸುತ್ತದೆ, ಅವರ ನಡುವಿನ ಭೌತಿಕ ಅಂತರವನ್ನು ಮರೆಸಿಬಿಡುತ್ತದೆ ಎಂಬುದನ್ನು ಇದು ತೋರಿಸುತ್ತದೆ. ಇದು ಪರದೆಯ ಮೇಲೆ ವರ್ಧಿತ ರಿಯಾಲಿಟಿ (AR) ಶಕ್ತಿಯನ್ನು ಪ್ರದರ್ಶಿಸುತ್ತದೆ. AR ಸಾಧನದ ಅಗತ್ಯವಿಲ್ಲದೆ ದೂರದಿಂದಲೇ ದೇಶಾದ್ಯಂತ ಮಕ್ಕಳಿಗೆ ಕಲಿಸಲು ಅದನ್ನು ಹೇಗೆ ಬಳಸಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com