ತಿಂಗಳ ಮೊದಲ ದಿನವೇ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಭಾರೀ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ವಾಣಿಜ್ಯ ಬಳಕೆಗಾಗಿ ಉಪಯೋಗಿಸುವ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ವಾಣಿಜ್ಯ ಬಳಕೆಗಾಗಿ ಉಪಯೋಗಿಸುವ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ.

ವರದಿಗಳ ಪ್ರಕಾರ, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಗಾಗಿ 19-ಕೆಜಿ ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 91.50 ರೂಪಾಯಿಗಳಷ್ಟು ಕಡಿಮೆ ಮಾಡಿದೆ, ಸೆಪ್ಟೆಂಬರ್ 1, 2022 ರಿಂದ ಪರಿಷ್ಕೃತ ದರ ಜಾರಿಗೆ ಬರುತ್ತದೆ.

ಪ್ರಕಟಣೆಯ ಪ್ರಕಾರ, 19 ಕೆಜಿ ವಾಣಿಜ್ಯ ಇಂಧನ ಗ್ಯಾಸ್ ಸಿಲಿಂಡರ್ ನ ಬೆಲೆ 1885 ರೂ.ಗಳಾಗಿರುತ್ತದೆ, ಹಳೆಯ ಬೆಲೆ 1976 07 ರೂಪಾಯಿಗಳಾಗಿತ್ತು.

ಅದೇ ರೀತಿ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 2095.50 ರ ಬದಲಿಗೆ 1995.50 ರೂಪಾಯಿಗೆ, ರೂ 1936.50 ರ ಬದಲು 1844 ರೂಪಾಯಿಗೆ ಹಾಗು ಮುಂಬೈನಲ್ಲಿ, ಮತ್ತು ಚೆನ್ನೈನಲ್ಲಿ 2141 ರೂ ಬದಲಿಗೆ 2045 ರೂ. ಸಿಗಲಿದೆ. ಆದರೆ, ಸದ್ಯಕ್ಕೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ತೈಲ ಕಂಪನಿಗಳು ಪ್ರತಿ ತಿಂಗಳ 1 ರಂದು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆಯನ್ನು ಗಮನದಲ್ಲಿಟ್ಟುಕೊಂಡು ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ಇವತ್ತು ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸಹ ಪರಿಷ್ಕರಿಸಿವೆ. ಬೆಲೆ ಇಳಿಕೆಯಾಗಿದ್ದು, ಜನರ ಜೇಬಿನಲ್ಲಿರುವ ಹಣಕ್ಕೆ ಕೊಂಚ ರಿಲೀಫ್ ಸಿಕ್ಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com