ಆಹಾರ ಪದಾರ್ಥಗಳ ಬೆಲೆ ಹೆಚ್ಚಳ: ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ!

ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.71 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ. 7ಕ್ಕೆ ಏರಿಕೆಯಾಗಿರುವುದನ್ನು ಸರ್ಕಾರದ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.71 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ. 7ಕ್ಕೆ ಏರಿಕೆಯಾಗಿರುವುದನ್ನು ಸರ್ಕಾರದ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.

ಗ್ರಾಹಕರ ಬೆಲೆ ಸೂಚ್ಯಂಕ ಆಧಾರಿತ ಹಣದುಬ್ಬರವು ಸತತ ಎಂಟನೇ ತಿಂಗಳಿಗೆ ರಿಸರ್ವ್ ಬ್ಯಾಂಕ್‌ನ ಆರಾಮದಾಯಕ ಮಟ್ಟವಾದ ಶೇಕಡಾ 6 ಕ್ಕಿಂತ ಹೆಚ್ಚಿದೆ. ಮಾಹಿತಿಯ ಪ್ರಕಾರ, ಆಹಾರದ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.69 ರಷ್ಟಿದ್ದ ಹಣದುಬ್ಬರ ಆಗಸ್ಟ್‌ನಲ್ಲಿ ಶೇ.7.62 ರಷ್ಟಾಗಿದೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇ.3.11 ರಷ್ಟಿತ್ತು. ಹಣದುಬ್ಬರ ನಿರ್ವಹಿಸಬಹುದಾದ ಮಟ್ಟಕ್ಕೆ ಇಳಿದಿದೆ ಎಂದು ಕಳೆದ ವಾರವಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹೇಳಿದ್ದರು. ಉದ್ಯೋಗ ಸೃಷ್ಟಿ ಮತ್ತು ಸಂಪತ್ತಿನ ಸಮಾನ ಹಂಚಿಕೆ ಇತರ ಕೇಂದ್ರೀಕೃತ ಕ್ಷೇತ್ರಗಳಾಗಿವೆ ಎಂದು ಅವರು ಇಂಡಿಯಾ ಐಡಿಯಾಸ್ ಶೃಂಗಸಭೆಯಲ್ಲಿ ಅವರು ಹೇಳಿದ್ದರು.

ಆಹಾರ ಪದಾರ್ಥಗಳ ಬೆಲೆಯಲ್ಲಿ ಅಷ್ಟಾಗಿ ಹೆಚ್ಚಳವಾಗದ ಹಿನ್ನೆಲೆಯಲ್ಲಿ ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ. 6.71 ರಷ್ಟಿತ್ತು. ಆದರೆ, ಮತ್ತೆ ಆಗಸ್ಟ್ ನಲ್ಲಿ ಮತ್ತೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com