ಪ್ರಧಾನಿ ಮೋದಿ ಭೇಟಿ ಮಾಡಿದ ಟಿಮ್ ಕುಕ್, ಭಾರತದಲ್ಲಿ ಹೆಚ್ಚು ಹೂಡಿಕೆಗೆ ಬದ್ಧ ಎಂದ ಆ್ಯಪಲ್ ಸಿಇಒ

ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಯಾಗಿರುವ ಭಾರತದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಬಯಸುತ್ತಿರುವ ಐಫೋನ್ ತಯಾರಕ, ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ...
ಪ್ರಧಾನಿ ಮೋದಿ ಭೇಟಿ ಮಾಡಿದ ಟಿಮ್ ಕುಕ್
ಪ್ರಧಾನಿ ಮೋದಿ ಭೇಟಿ ಮಾಡಿದ ಟಿಮ್ ಕುಕ್

ನವದೆಹಲಿ: ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಯಾಗಿರುವ ಭಾರತದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಬಯಸುತ್ತಿರುವ ಐಫೋನ್ ತಯಾರಕ, ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಕುಕ್ ಅವರು ಏಳು ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ್ದು, ಮಂಗಳವಾರ ಮುಂಬೈನಲ್ಲಿ ಆ್ಯಪಲ್‌ನ ಮೊದಲ ರಿಟೇಲ್ ಮಳಿಗೆಯನ್ನು ಉದ್ಘಾಟಿಸಿದ್ದು, ಗುರುವಾರ ದೆಹಲಿಯಲ್ಲಿ ಮತ್ತೊಂದು ಮಳಿಗೆಗೆ ಚಾಲನೆ ನೀಡಲಿದ್ದಾರೆ.

ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಬಳಿಕ ಟ್ವೀಟ್ ಮಾಡಿದ ಟಿಮ್ ಕುಕ್, "ನನಗೆ ಆತ್ಮೀಯ ಸ್ವಾಗತ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದಗಳು. ಶಿಕ್ಷಣ ಮತ್ತು ಡೆವಲಪರ್‌ಗಳಿಂದ ಹಿಡಿದು ಉತ್ಪಾದನೆ ಮತ್ತು ಪರಿಸರದವರೆಗೆ ತಂತ್ರಜ್ಞಾನವು ಭಾರತದ ಭವಿಷ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುವ ನಿಮ್ಮ ದೃಷ್ಟಿಕೋನವನ್ನು ನಾವು ಹಂಚಿಕೊಳ್ಳುತ್ತೇವೆ. ನಾವು ದೇಶಾದ್ಯಂತ ಹೂಡಿಕೆ ಮಾಡಲು ಬದ್ಧರಾಗಿದ್ದೇವೆ" ಎಂದು ಮೋದಿಯವರಿಗೆ ಹಸ್ತಲಾಘವ ಮಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಕುಕ್ ಅವರು 2016 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದ ಆ್ಯಪಲ್ ಸಿಇಒ, ತಮ್ಮ ಕಂಪನಿಯ ಅಗತ್ಯಗಳಿಗೆ ಅನುಗುಣವಾಗಿ ಭಾರತದ ಕೆಲಸಗಾರರಿಗೆ ತರಬೇತಿ ನೀಡಲು ನೆರವು ನೀಡಬೇಕು ಎಂದು ಕೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com