ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ಬೆಲೆ ಇಂದಿನಿಂದ ಜಾರಿ

ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 99.75 ರೂಪಾಯಿ ಕಡಿತಗೊಳಿಸಿದೆ. ಆದರೆ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಯಥಾಸ್ಥಿತಿ ಮುಂದುವರಿದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 99.75 ರೂಪಾಯಿ ಕಡಿತಗೊಳಿಸಿದೆ. ಆದರೆ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಯಥಾಸ್ಥಿತಿ ಮುಂದುವರಿದಿದೆ. 

ಬೆಲೆ ಇಳಿಕೆಯ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ ರಾಜಧಾನಿ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 1,680 ರೂಪಾಯಿಗಳಾಗಿದೆ. ಈ ಬೆಲೆ ಇಳಿಕೆ ಕೇವಲ ವಾಣಿಜ್ಯ ಸಿಲಿಂಡರ್​ಗಳಿಗೆ ಮಾತ್ರ ಅನ್ವಯವಾಗಲಿದೆ. ವ್ಯಾಪಾರಿ, ಹೋಟೆಲ್​ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ಸಮಾಧಾನ ತಂದಿದೆ ಎಂದು ಹೇಳಬಹುದು.

ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,680 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ 1,802 ರೂಪಾಯಿ, ಮುಂಬೈನಲ್ಲಿ 1,640 ರೂಪಾಯಿ ಮತ್ತು ಚೆನ್ನೈನಲ್ಲಿ 1,852 ರೂಪಾಯಿ ಆಗಿದೆ. ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಕೊನೆಯ ಬಾರಿ ಮಾರ್ಚ್​ನಲ್ಲಿ ಸಿಲಿಂಡರ್ ಬೆಲೆ ಬದಲಾಗಿತ್ತು. ಸದ್ಯ 14.2 ಕೆಜಿ ಸಿಲಿಂಡರ್ ಬೆಲೆ 1,103 ರೂಪಾಯಿ ಇದೆ.

ವಿಭಿನ್ನ ತೆರಿಗೆ ಸ್ಲ್ಯಾಬ್‌ಗಳಿಂದಾಗಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳು ದೇಶೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ.

14.2 ಕೆಜಿ ಎಲ್‌ಪಿಜಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆಯನ್ನು ಮಾರ್ಚ್ 1 ರಿಂದ ಪರಿಷ್ಕರಿಸಲಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com