ಏಪ್ರಿಲ್-ಜೂನ್‌ನಲ್ಲಿ ಜಿಡಿಪಿ ಶೇ.7.8 ರಷ್ಟು ಬೆಳವಣಿಗೆ; ಚೀನಾ ಹಿಂದಿಕ್ಕಿದ ಭಾರತ

2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, 2023ರ ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇ. 7.8ರಷ್ಟು ಹೆಚ್ಚಿದೆ. 

ಇನ್ನು ಹಿಂದಿನ ಕ್ವಾರ್ಟರ್​ನಲ್ಲಿ, ಅಂದರೆ 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಭಾರತದ ಜಿಡಿಪಿ ಶೇ. 6.1ರಷ್ಟು ಇತ್ತು. 2022-23ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) 13.1 ರಷ್ಟು ವಿಸ್ತರಿಸಿದೆ.

ಏಪ್ರಿಲ್-ಜೂನ್ 2023 ರಲ್ಲಿ ಚೀನಾ ಕೇವಲ ಶೇ. 6.3 ಬೆಳವಣಿಗೆಯನ್ನು ದಾಖಲಿಸಿದ್ದು, ಭಾರತ ಚೀನಾವನ್ನು ಹಿಂದಿಕ್ಕಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನ ಉಳಿಸಿಕೊಂಡಿದೆ.

ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ದತ್ತಾಂಶದ ಪ್ರಕಾರ, ಕೃಷಿ ವಲಯವು ಶೇ. 3.5 ರಷ್ಟು ಬೆಳವಣಿಗೆ ಕಂಡಿದೆ. 2022-23ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ. 2.4 ರಷ್ಟು ಬೆಳವಣೆಗೆ ದಾಖಲಿಸಿತ್ತು. ಆದರೂ, ಪ್ರಸಕ್ತ ಹಣಕಾಸು ವರ್ಷದ ಆರಂಭಿಕ ತ್ರೈಮಾಸಿಕದಲ್ಲಿ ಉತ್ಪಾದನಾ ವಲಯದ ಬೆಳವಣಿಗೆಯ ವೇಗವು ಶೇಕಡಾ 4.7 ಕ್ಕೆ ಕಡಿಮೆಯಾಗಿದೆ, ಕಳೆದ ವರ್ಷದ ಅವಧಿಯಲ್ಲಿ ಇದು ಶೇಕಡಾ 6.1 ರಷ್ಟಿತ್ತು.

'ಹಣಕಾಸು, ರಿಯಲ್ ಎಸ್ಟೇಟ್ ಮತ್ತು ವೃತ್ತಿಪರ ಸೇವೆಗಳ' ಜಿವಿಎ ವಿಸ್ತರಣೆಯು ಶೇಕಡಾ 12.2 ರಷ್ಟಿದ್ದು, ಹಿಂದಿನ ವರ್ಷದ ತ್ರೈಮಾಸಿಕದಲ್ಲಿ ಶೇಕಡಾ 8.5 ರಷ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com