ಚಿನ್ನದ ದರ (ಸಂಗ್ರಹ ಚಿತ್ರ)
ಚಿನ್ನದ ದರ (ಸಂಗ್ರಹ ಚಿತ್ರ)

ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಳಿಕೆ: ಇಂದಿನ ದರ ಪಟ್ಟಿ ಹೀಗಿದೆ

ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ರಾಜ್ಯದಲ್ಲಿ ಬಂಗಾರದ ಧಾರಣೆಯ ಇಂದಿನ ದರ ಇಂತಿದೆ.

ಬೆಂಗಳೂರು: ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ರಾಜ್ಯದಲ್ಲಿ ಬಂಗಾರದ ಧಾರಣೆಯ ಇಂದಿನ ದರ ಇಂತಿದೆ.

22 ಕ್ಯಾರೆಟ್‌ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, 22 ಕ್ಯಾರೆಟ್ ಚಿನ್ನದಲ್ಲಿ 40 ರೂ ಮತ್ತು 24 ಕ್ಯಾರೆಟ್ ಚಿನ್ನದ ದರದಲ್ಲಿ 44ರೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನ 5745ರೂ ದರದಲ್ಲಿದ್ದು, ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 6,267 ಆಗಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ 77.25 ರೂನಷ್ಟಿದ್ದು, ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು ಸುರಕ್ಷಿತ ಆಸ್ತಿಯಾಗಿ ನೋಡಲಾಗುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು. ಅಮೆರಿಕ ಡಾಲರ್ ದುರ್ಬಲತೆ ಮತ್ತು ಅಮೆರಿಕ ಖಜಾನೆ ಇಳುವರಿಯಲ್ಲಿ ಇಳಿಕೆಯ ನಡುವೆ ಕಳೆದೊಂದು ವಾರದಿಂದ ಚಿನ್ನದ ಬೆಲೆಯಲ್ಲಿ ಜಿಗಿತ ಕಂಡುಬಂದಿತ್ತು.

ಜಾಗತಿಕ ಆರ್ಥಿಕತೆಯಲ್ಲಿನ ಮಂದಗತಿಗೆ ಸಂಬಂಧಿಸಿದ ಕಳವಳಗಳ ನಡುವೆಯೇ, ಸುರಕ್ಷಿತ ಆಸ್ತಿಯ ಚಿನ್ನದ ಮೇಲೆ ಹೂಡಿಕೆದಾರರ ಆಸಕ್ತಿ ಹೆಚ್ಚಿದೆ. ಇದೀಗ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com