ನಾನೂ ಮಧ್ಯಮ ವರ್ಗದಿಂದ ಬಂದವಳು, ಅವರ ಒತ್ತಡ ಅರ್ಥವಾಗುತ್ತೆ: ನಿರ್ಮಲಾ ಸೀತಾರಾಮನ್

ನಾನು ಸಹ ಮಧ್ಯಮ ವರ್ಗದ ಕುಟುಂಬದಿಂದ ಬಂದಳು. ಹೀಗಾಗಿ ಮಧ್ಯಮ ವರ್ಗದವರ ಒತ್ತಡದ ಬಗ್ಗೆ ನನಗೂ ಅರ್ಥವಾಗುತ್ತದೆ. ಆದರೆ ಪ್ರಸ್ತುತ ಸರ್ಕಾರವು ಅವರ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ...
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ನಾನು ಸಹ ಮಧ್ಯಮ ವರ್ಗದ ಕುಟುಂಬದಿಂದ ಬಂದಳು. ಹೀಗಾಗಿ ಮಧ್ಯಮ ವರ್ಗದವರ ಒತ್ತಡದ ಬಗ್ಗೆ ನನಗೂ ಅರ್ಥವಾಗುತ್ತದೆ. ಆದರೆ ಪ್ರಸ್ತುತ ಸರ್ಕಾರವು ಅವರ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ ಎಂದು ಕೇಂದ್ರ ಬಜೆಟ್‌ಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಹೇಳಿದ್ದಾರೆ.

ಸೀತಾರಾಮನ್ ಅವರು ಫೆಬ್ರವರಿ 1 ರಂದು ಲೋಕಸಭೆಯಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ತೆರಿಗೆದಾರರಿಗೆ ರಿಲೀಫ್ ನೀಡುತ್ತದೆ ಎಂಬ ನಿರೀಕ್ಷೆಗಳಿವೆ.

ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಾರಪತ್ರಿಕೆಯಾದ ಪಾಂಚಜನ್ಯ ನಿಯತಕಾಲಿಕೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, "ನಾನೂ ಮಧ್ಯಮ ವರ್ಗದವಳು. ಹಾಗಾಗಿ ಮಧ್ಯಮ ವರ್ಗದ ಒತ್ತಡವನ್ನು ಅರ್ಥಮಾಡಿಕೊಳ್ಳಬಲ್ಲೆ. ಮಧ್ಯಮ ವರ್ಗದವರೊಂದಿಗೆ ನನ್ನನ್ನು ಗುರುತಿಸಿಕೊಳ್ಳುತ್ತೇನೆ ಎಂದರು.

ಪ್ರಸ್ತುತ ಮೋದಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ. ಅಲ್ಲದೆ, 5 ಲಕ್ಷದವರೆಗಿನ ಆದಾಯಕ್ಕೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಅವರು ಹೇಳಿದರು.

ದೇಶದ 27 ನಗರಗಳಲ್ಲಿ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜೀವನ ಸೌಕರ್ಯವನ್ನು ಉತ್ತೇಜಿಸಲು 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಕೇಂದ್ರ ಸಚಿವೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com