ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನಗಳ ಸಂಚಾರ ಆರಂಭ

ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಎಐಇ) ಮಂಗಳೂರು ಮತ್ತು ಬೆಂಗಳೂರು ನಡುವೆ ಎರಡು ವಿಮಾನಗಳ ಸೇವೆಯನ್ನು ಆರಂಭಿಸಿದ್ದು, ಈ ಎರಡೂ ನಗರಗಳ ನಡುವಿನ ಸಂಪರ್ಕವನ್ನು ವಿಸ್ತರಿಸಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)

ಮಂಗಳೂರು: ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಎಐಇ) ಮಂಗಳೂರು ಮತ್ತು ಬೆಂಗಳೂರು ನಡುವೆ ಎರಡು ವಿಮಾನಗಳ ಸೇವೆಯನ್ನು ಆರಂಭಿಸಿದ್ದು, ಈ ಎರಡೂ ನಗರಗಳ ನಡುವಿನ ಸಂಪರ್ಕವನ್ನು ವಿಸ್ತರಿಸಿದೆ.

ಇದರೊಂದಿಗೆ ಮಂಗಳೂರಿಗೆ ಈಗ ಒಟ್ಟು ಏಳು ವಿಮಾನಗಳು ರಾಜ್ಯ ರಾಜಧಾನಿಯಿಂದ ಸಂಚರಿಸಲಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಮೊದಲನೇ ವಿಮಾನ IX 782 ಮಂಗಳವಾರದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ. ಎರಡನೇ ವಿಮಾನ IX1795 ಕಣ್ಣೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ.

ಹೊಸ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ, ವಿಮಾನ ನಿಲ್ದಾಣವು ಸಾಂಪ್ರದಾಯಿಕ ಜಲಫಿರಂಗಿ ಗೌರವವನ್ನು ನೀಡಿತು.

ವಿಮಾನದಲ್ಲಿದ್ದ ಮೊದಲ ಬ್ಯಾಚ್ ಪ್ರಯಾಣಿಕರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com