ಹಿಂಡನ್‌ಬರ್ಗ್‌ ಎಫೆಕ್ಟ್: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ, ಮತ್ತೆ ಭಾರತದ ನಂ.1 ಶ್ರೀಮಂತ

ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಉದ್ಯಮಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ...
ಮುಖೇಶ್ ಅಂಬಾನಿ
ಮುಖೇಶ್ ಅಂಬಾನಿ

ನವದೆಹಲಿ: ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಉದ್ಯಮಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿದ ಮುಖೇಶ್ ಅಂಬಾನಿ ಅವರು 84.3 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಭಾರತೀಯ ಎಂದು ಗುರುತಿಸಿಕೊಂಡಿದ್ದಾರೆ.

ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಅದಾನಿ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ವಿಶ್ವದ ಮೊದಲ 500 ಶ್ರೀಮಂತ ಪುರುಷರು ಮತ್ತು ಮಹಿಳೆಯರ ಪಟ್ಟಿಯಲ್ಲಿ, ಅದಾನಿ 2023ನೇ ವರ್ಷದಲ್ಲಿ ಅತಿದೊಡ್ಡ ಕುಸಿತ ಕಂಡಿದ್ದಾರೆ.

ವಿಶ್ವದ ಹತ್ತು ಶ್ರೀಮಂತರ ಪಟ್ಟಿಯಲ್ಲಿ ಸದ್ಯ ಬರ್ನಾರ್ಡ್ ಅರ್ನಾಲ್ಟ್ ಮೊದಲ ಸ್ಥಾನದಲ್ಲಿದ್ದಾರೆ. ಎಲಾನ್ ಮಸ್ಕ್ ಅವರು 178.3 ಬಿಲಿಯನ್ ಡಾಲರ್ ನಿವ್ವಳ ಆದಾಯದೊಂದಿಗೆ ಎರಡನೇ ಸ್ಥಾನದಲ್ಲಿದ್ದು, 126.3 ಬಿಲಿಯನ್ ಡಾಲರ್ ಆದಾಯ ಹೊಂದಿರುವ ಜೆಫ್ ಬಿಜೋಸ್ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com