ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 25 ರೂ ಹೆಚ್ಚಳ: ನೂತನ ದರ ಇಂದಿನಿಂದ ಅನ್ವಯ
ಹೊಸ ವರ್ಷ ದಿನ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆ LPG ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಾಗಿದೆ. ಗೃಹಬಳಕೆಯ LPG ಸಿಲಿಂಡರ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ.
Published: 01st January 2023 12:21 PM | Last Updated: 01st January 2023 12:21 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಹೊಸ ವರ್ಷ ದಿನ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆ LPG ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಾಗಿದೆ. ಗೃಹಬಳಕೆಯ LPG ಸಿಲಿಂಡರ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ.
ಈ ಹೆಚ್ಚಳದೊಂದಿಗೆ ದೆಹಲಿಯಲ್ಲಿ ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,769 ರೂಪಾಯಿಯಾಗಿದೆ.
ಹೊಸ ವರ್ಷದ ಆರಂಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ಹೊಟೇಲ್, ಕ್ಯಾಂಟೀನ್, ರೆಸ್ಟೋರೆಂಟ್, ಸ್ಟಾರ್ ಹೊಟೇಲ್ ಗಳಲ್ಲಿ ಆಹಾರ ಬೆಲೆ ಹೆಚ್ಚಳವಾದರೆ ಅಚ್ಚರಿಯಿಲ್ಲ.