ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ರಾಜೀನಾಮೆ; ನೂತನ ಸಿಇಒ ಆಗಿ ಕೆ ಕೃತಿವಾಸನ್ ನೇಮಕ
ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್)ನ ಸಿಇಒ ರಾಜೇಶ್ ಗೋಪಿನಾಥನ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಂಪನಿಯ ಬಿಎಫ್‌ಎಸ್‌ಐ ವಿಭಾಗದ ಜಾಗತಿಕ ಮುಖ್ಯಸ್ಥ ಕೆ ಕೃತಿವಾಸನ್..
Published: 16th March 2023 11:20 PM | Last Updated: 16th March 2023 11:20 PM | A+A A-

ರಾಜೇಶ್ ಗೋಪಿನಾಥನ್
ನವದೆಹಲಿ: ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್)ನ ಸಿಇಒ ರಾಜೇಶ್ ಗೋಪಿನಾಥನ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಂಪನಿಯ ಬಿಎಫ್‌ಎಸ್‌ಐ ವಿಭಾಗದ ಜಾಗತಿಕ ಮುಖ್ಯಸ್ಥ ಕೆ ಕೃತಿವಾಸನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ.
ಗೋಪಿನಾಥನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯು ಸೆಪ್ಟೆಂಬರ್ 15, 2023 ರಂದು ಜಾರಿಗೊಳ್ಳಲಿದೆ. ಅಲ್ಲಿಯವರೆಗೆ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಟಿಸಿಎಸ್ ತಿಳಿಸಿದೆ.
ಇದನ್ನು ಓದಿ: ಟಿಸಿಎಸ್ ಸಿಇಒ ವೇತನ ಶೇ.27 ರಷ್ಟು ಏರಿಕೆ: 26 ಕೋಟಿ ರೂ.!!
"ರಾಜೇಶ್ ಗೋಪಿನಾಥನ್ ಅವರು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನೊಂದಿಗೆ 22 ವರ್ಷಗಳ ವೃತ್ತಿಜೀವನದ ನಂತರ ಮತ್ತು ಕಳೆದ 6 ವರ್ಷಗಳಿಂದ ಟಿಸಿಎಸ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ಇತರ ಆಸಕ್ತಿಗಳನ್ನು ಮುಂದುವರಿಸಲು ಕಂಪನಿಯಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ" ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.