ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಗೆ 14 ದಿನಗಳ ನ್ಯಾಯಾಂಗ ಬಂಧನ!
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ.ಗಳ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಎರಡು ವಾರಗಳ ಹಿಂದೆ ಬಂಧಿಸಿತ್ತು.
Published: 14th September 2023 12:59 PM | Last Updated: 14th September 2023 02:18 PM | A+A A-

ನರೇಶ್ ಗೋಯಲ್
ಮುಂಬೈ: ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ.ಗಳ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಎರಡು ವಾರಗಳ ಹಿಂದೆ ಬಂಧಿಸಿತ್ತು.
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್, ಗೋಯಲ್, ಅವರ ಪತ್ನಿ ಅನಿತಾ ಮತ್ತು ಕೆಲವು ಮಾಜಿ ಕಂಪನಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳದ ಎಫ್‌ಐಆರ್‌ನಿಂದ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ: ಇಡಿಯಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ
ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ (ಜೆಐಎಲ್) 848.86 ಕೋಟಿ ರೂ.ಗಳ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ. 538 ಕೋಟಿ ರೂ. ಪಾವತಿಸದೆ ವಂಚನೆ ಎಸಗಿದ್ದಾರೆ ಎಂಬ ಬ್ಯಾಂಕ್‌ನ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಜುಲೈ 29, 2021 ರಂದು ಖಾತೆಯನ್ನು ವಂಚನೆ ಎಂದು ಸಿಬಿಐ ಘೋಷಿಸಿತ್ತು.