ವಾಣಿಜ್ಯ ಬಳಕೆ ಮತ್ತು 5 ಕೆಜಿ FTL ಸಿಲಿಂಡರ್ ಬೆಲೆ ಇಳಿಕೆ.. ನೂತನ ದರ ಹೀಗಿದೆ...

ತೈಲ ಮಾರುಕಟ್ಟೆ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಆರ್ಥಿಕ ವರ್ಷದ ಮೊದಲ ದಿನ ಇಳಿಕೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತೈಲ ಮಾರುಕಟ್ಟೆ ಕಂಪೆನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ಗಳ ಬೆಲೆಯನ್ನು ಆರ್ಥಿಕ ವರ್ಷದ ಮೊದಲ ದಿನ ಇಳಿಕೆ ಮಾಡಿದೆ.

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗೆ 30.50 ರೂಪಾಯಿ ಇಳಿಕೆಯಾಗಿದೆ. ಏಪ್ರಿಲ್ 1 ರಿಂದ ದೆಹಲಿಯಲ್ಲಿ ವಾಣಿಜ್ಯ ಸಿಲೆಂಡರ್ ಬೆಲೆ 1764.50 ಆಗಿದೆ. 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.

ಮಾರ್ಚ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿತ್ತು. ಬೆಲೆಗಳಲ್ಲಿನ ಈ ಪರಿಷ್ಕರಣೆಯು ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಏರಿಳಿತಕ್ಕೆ ಅನುಗುಣವಾಗಿ ಇರುತ್ತದೆ.

ಫೆಬ್ರವರಿ 1 ರಂದು, ಮೆಟ್ರೋ ನಗರಗಳಾದ್ಯಂತ ಇಂಡೇನ್ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಬದಲಾಗಿದ್ದವು. ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಹೀಗೆ ಪ್ರತಿಯೊಂದು ನಗರಗಳಲ್ಲಿ ವಿಭಿನ್ನ ದರಗಳನ್ನು ಹೊಂದಿವೆ.

ಮಾರ್ಚ್ 1ರಂದು ಎಲ್ಲಾ ಮೆಟ್ರೋ ನಗರಗಳಲ್ಲಿ ಇಂಡೇನ್ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ.

ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಅಂತಾರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ವ್ಯತ್ಯಾಸ ಹೀಗೆ ವಿವಿಧ ಅಂಶಗಳು ಕಾರಣವಾಗುತ್ತವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com