
ನವದೆಹಲಿ: ಭಾರತದ ಪ್ರಮುಖ ಐಟಿ ಕಂಪನಿ ವಿಪ್ರೋ ಸಿಇಒ ಥಿಯೆರಿ ಡೆಲಾಪೋರ್ಟೆ ಅವರು ಶನಿವಾರ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶ್ರೀನಿವಾಸ್ ಪಲ್ಲಿಯಾ ಅವರನ್ನು ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ತಕ್ಷಣವೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಥಿಯೆರ್ರಿ ಡೆಲಾಪೋರ್ಟೆ ಅವರು ರಾಜೀನಾಮೆ ನೀಡಿದ್ದಾರೆ. 2024ರ ಮೇ 31ರಂದು ಅವರನ್ನು ಕಂಪೆನಿಯ ಉದ್ಯೋಗದಿಂದ ಮುಕ್ತಗೊಳಿಸಲಾಗುವುದು ಎಂದು ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್ ಜಿ ಅವರು ತಿಳಿಸಿದ್ದಾರೆ.
ನಿರ್ದೇಶಕರ ಮಂಡಳಿಯು ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಶ್ರೀನಿವಾಸ್ ಪಲ್ಲಿಯಾ ಅವರನ್ನು ನೇಮಿಸಲು ಅನುಮೋದಿಸಿದೆ ಎಂದು ವಿಪ್ರೋ ಹೇಳಿದೆ.
56 ವರ್ಷದ ಡೆಲಾಪೋರ್ಟೆ ಅವರನ್ನು 2020ರ ಜುಲೈಯಲ್ಲಿ ಕಂಪೆನಿಯ ಸಿಇಒ ಮತ್ತು ಎಂಡಿ ಆಗಿ ನೇಮಿಸಲಾಗಿತ್ತು. ಇದಕ್ಕೂ ಮೊದಲು, ಫ್ರೆಂಚ್ ಮೂಲದ ಟೆಕ್ ಬಾಸ್ ಕ್ಯಾಪ್ಜೆಮಿನಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಆಗಿ ಕರ್ತವ್ಯ ನಿರ್ವಹಿಸಿದ್ದರು.
Advertisement