ಏಪ್ರಿಲ್ 30 ರವರೆಗೆ ಟೆಲ್ ಅವಿವ್‌ಗೆ ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ

ಏರ್ ಇಂಡಿಯಾ ತನ್ನ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳ ಸೇವೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ.
 ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ ವಿಮಾನ

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ತನ್ನ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಿಂದ ಟೆಲ್ ಅವಿವ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳ ಸೇವೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, "ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು ಏಪ್ರಿಲ್ 30, 2024 ರವರೆಗೆ ಸ್ಥಗಿತಗೊಳಿಸಲಾಗುತ್ತದೆ" ಎಂದು ಹೇಳಿದೆ.

ಬುಕಿಂಗ್‌ಗಳನ್ನು ದೃಢೀಕರಿಸಿದ ತನ್ನ ಪ್ರಯಾಣಿಕರಿಗೆ, ದಿನಾಂಕ ಮರುಹೊಂದಿಸುವಿಕೆ ಮತ್ತು ರದ್ದತಿ ಶುಲ್ಕಗಳನ್ನು ಒಂದು ಬಾರಿ ಮನ್ನಾ ಮಾಡುವುದಾಗಿ ಏರ್ ಇಂಡಿಯಾ ತಿಳಿಸಿದೆ.

 ಏರ್ ಇಂಡಿಯಾ ವಿಮಾನ
ಇರಾನ್-ಇಸ್ರೇಲ್ ಸಂಘರ್ಷ: ಟೆಲ್ ಅವೀವ್ ಗೆ ತಾತ್ಕಾಲಿಕವಾಗಿ ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ!

"ಏರ್ ಇಂಡಿಯಾದಲ್ಲಿ, ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಮೊದಲ ಆದ್ಯತೆಯಾಗಿದೆ ಎಂದು ನಾವು ಪುನರುಚ್ಚರಿಸಲು ಬಯಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ನಮ್ಮ 24/7 ಸಂಪರ್ಕ ಕೇಂದ್ರಕ್ಕೆ 011-69329333 / 011-69329999 ಗೆ ಕರೆ ಮಾಡಿ ಅಥವಾ ನಮ್ಮ ವೆಬ್‌ಸೈಟ್ http:// ಗೆ ಭೇಟಿ ನೀಡಿ airindia.com," ಎಂದು ಏರ್ ಇಂಡಿಯಾ ಪೋಸ್ಟ್‌ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com