
ನವದೆಹಲಿ: ಕಳೆದ ವರ್ಷದ ಡಿಸೆಂಬರ್‌ನಿಂದ ಚಿಲ್ಲರೆ ಹಣದುಬ್ಬರವು ಸತತ ಇಳಿಕೆಯಾಯಾಗುತ್ತಿದ್ದು, ಜುಲೈನಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 3.54 ಕ್ಕೆ ತಗ್ಗಿದೆ. ಇದು 5 ವರ್ಷಗಳಲ್ಲಿ ಮೊದಲ ಬಾರಿಗೆ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇಕಡಾ 4 ಕ್ಕಿಂತ ಕಡಿಮೆಯಾಗಿದೆ.
ಕೆಲವು ಆಹಾರ ವಸ್ತುಗಳ ಬೆಲೆಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗಿರುವುದರಿಂದ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ಕೇಂದ್ರ ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರವು ಜೂನ್ 2024 ರಲ್ಲಿ ಶೇ. 5.08 ರಷ್ಟು ಇತ್ತು. ಅದು ಜುಲೈನಲ್ಲಿ ಶೇ. 3.54ಕ್ಕೆ ಇಳಿದಿದೆ. ಜುಲೈ 2023 ರಲ್ಲಿ ಶೇಕಡಾ 7.44 ರಷ್ಟಿತ್ತು.
ರಾಷ್ಟ್ರೀಯ ಅಂಕಿಅಂಶ ಕಚೇರಿ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಆಹಾರದ ಹಣದುಬ್ಬರವು ಜುಲೈನಲ್ಲಿ ಶೇ. 5.42ಕ್ಕೆ ಇಳಿದಿದೆ. ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇ. 9.36 ರಷ್ಟು ಇತ್ತು.
ಜುಲೈನಿಂದ ಸೆಪ್ಟಂಬರ್ವರೆಗಿನ ತ್ರೈಮಾಸಿಕದಲ್ಲಿ ಹಣದುಬ್ಬರ ಶೇ. 4.4ರಷ್ಟಿರಬಹುದು ಎಂದು ಆರ್ಬಿಐ ಅಂದಾಜು ಮಾಡಿತ್ತು. ಆದರೆ, ವಾಸ್ತವದಲ್ಲಿ ಹಣದುಬ್ಬರ ಈ ಅವಧಿಯಲ್ಲಿ ಇನ್ನೂ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Advertisement