Indian Stock Market: RBI ರೆಪೋ ಎಫೆಕ್ಟ್, 5 ದಿನಗಳ ಗೂಳಿ ಓಟಕ್ಕೆ ಬ್ರೇಕ್

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.12 ರಿಂದ ಶೇ.0.069ರಷ್ಟು ಕುಸಿತ ಕಂಡಿದೆ.
Indian Stock Markets
ಭಾರತೀಯ ಷೇರುಮಾರುಕಟ್ಟೆ
Updated on: 

ಮುಂಬೈ: ಸತತ 5 ದಿನಗಳಿಂದ ಏರುಗತಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ನೀತಿಯಲ್ಲಿ ಪರಿಷ್ಕರಣೆ ತಂದ ಬೆನ್ನಲ್ಲೇ ಅಲ್ಪ ಪ್ರಮಾಣದಲ್ಲಿ ಕುಸಿದಿದೆ.

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.12 ರಿಂದ ಶೇ.0.069ರಷ್ಟು ಕುಸಿತ ಕಂಡಿದ್ದು, ಸೆನ್ಸೆಕ್ಸ್ 56.74 ಅಂಕಗಳ ಇಳಿಕೆಯೊಂದಿಗೆ 81,709.12 ಅಂಕಗಳಿಗೆ ಕುಸಿತವಾಗಿದೆ. ಅಂತೆಯೇ ನಿಫ್ಟಿ ಕೂಡ 30.60 ಅಂಕಗಳ ಅಲ್ಪ ಕುಸಿತದೊಂದಿಗೆ 24,677.80 ಅಂಕಗಳಿಗೆ ಕುಸಿತವಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

Indian Stock Markets
ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತ

ಆರ್ ಬಿಐ ಪ್ರಭಾವ

ಇನ್ನು ಇಂದು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ 11 ನೇ ಬಾರಿಗೆ ನೀತಿ ದರವನ್ನು ಬದಲಿಸದೆ ಶೇಕಡಾ 6.5ರಷ್ಟು ಯಥಾಸ್ಥಿತಿ ಕಾಯ್ದಿರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯಾದ ಶೇಕಡಾ 7.2 ರ ಬದಲು ಶೇಕಡಾ 6.6ಕ್ಕೆ ತಗ್ಗಿಸಿದೆ.

ಅಂತೆಯೇ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಅಂತೆಯೇ ವಿತ್ತೀಯ ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಶೇಕಡಾ 6.5ದಲ್ಲಿ ಇರಿಸಲು ನಿರ್ಧರಿಸಿದೆ ಮತ್ತು ನೀತಿ ನಿಲುವನ್ನು ತಟಸ್ಥವಾಗಿ ಇರಿಸಿದೆ.

ಇಂದು ಐಟಿ ಮತ್ತು ಮಾಧ್ಯಮ ವಲಯಗಳ ಷೇರುಗಳು ಹೊರತು ಪಡಿಸಿ ಆಟೋ, ಮೆಟಲ್, FMCG, ಟೆಲಿಕಾಂ, PSU ಬ್ಯಾಂಕ್ ಸೇರಿದಂತೆ ಬಹುತೇಕ ಎಲ್ಲ ವಲಯಗಳು ಷೇರುಗಳು ಉತ್ತಮ ವಹಿವಾಟು ನಡೆಸಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಜಾಜ್ ಆಟೋ, ಆಕ್ಸಿಸ್ ಬ್ಯಾಂಕ್, ಎಸ್‌ಬಿಐ ಲೈಫ್, ಟಾಟಾ ಮೋಟಾರ್ಸ್, ಮಾರುತಿ ಸುಜುಕಿ ಲಾಭಾಂಶ ಕಂಡಿದ್ದು, ಅದಾನಿ ಪೋರ್ಟ್ಸ್, ಸಿಪ್ಲಾ, ಭಾರ್ತಿ ಏರ್‌ಟೆಲ್, ಎಚ್‌ಡಿಎಫ್‌ಸಿ ಲೈಫ್ ಮತ್ತು ಏಷ್ಯನ್ ಪೇಂಟ್ಸ್ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com