

ಮುಂಬೈ: ಮಂಗಳವಾರ ಭಾರತೀಯ ಷೇರುಮಾರುಕಟ್ಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸೆನ್ಸೆಕ್ಸ್ ಅಲ್ಪ ಏರಿಕೆ ಮತ್ತು ನಿಫ್ಟಿ ಅಲ್ಪ ಪ್ರಮಾಣದ ಇಳಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.0019ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.036ರಷ್ಟು ಕುಸಿತ ಕಂಡಿದೆ.
ಸೆನ್ಸೆಕ್ಸ್ ಇಂದು ಕೇವಲ 1.59 ಅಂಕಗಳ ಏರಿಕೆಯೊಂದಿಗೆ 81,510.05 ಅಂಕಗಳಿಗೆ ಏರಿದ್ದರೆ, ನಿಫ್ಟಿ 8.95 ಅಂಕಗಳ ಅಲ್ಪ ಕುಸಿತದೊಂದಿಗೆ 24,610.05 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ ವಲಯ ಮತ್ತು ಬ್ಯಾಂಕಿಂಗ್ ಷೇರುಗಳು ಹೆಚ್ಟಿನ ಲಾಭಾಂಶ ಕಂಡಿದ್ದು, ವೈಯಕ್ತಿಕ ಷೇರು ವಹಿವಾಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಜಾಜ್ ಫಿನ್‌ಸರ್ವ್, ಎಚ್‌ಸಿಎಲ್ ಟೆಕ್, ಇನ್ಫೋಸಿಸ್, ಎಸ್‌ಬಿಐ, ಬಜಾಜ್ ಫೈನಾನ್ಸ್, ICICI ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದ್ದು, ಭಾರ್ತಿ ಏರ್‌ಟೆಲ್, ಅದಾನಿ ಪೋರ್ಟ್, ಎಕ್ಸಿಸ್ ಬ್ಯಾಂಕ್, ಟೆಕ್ ಮಹೀಂದ್ರಾ, RIL ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.