ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ.
ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ ಇಂದಿನಿಂದ (ಫೆಬ್ರವರಿ 1) ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.
ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತದೆ.
Advertisement