ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌(PPBL)ನ ಅರೆಕಾಲಿಕ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.
ವಿಜಯ್ ಶೇಖರ್ ಶರ್ಮಾ
ವಿಜಯ್ ಶೇಖರ್ ಶರ್ಮಾ
Updated on

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌(PPBL)ನ ಅರೆಕಾಲಿಕ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ ಮತ್ತು ಬ್ಯಾಂಕ್‌ನ ಆಡಳಿತ ಮಂಡಳಿಯನ್ನು ಪುನರ್ರಚಿಸಲಾಗಿದೆ.

ಮಾರ್ಚ್ 15 ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ PPBL ಅನ್ನು ನಿರ್ಬಂಧಿಸಿದೆ.

ವಿಜಯ್ ಶೇಖರ್ ಶರ್ಮಾ
ಫೆಬ್ರವರಿ 29ರಿಂದ Paytm ಪೇಮೆಂಟ್ಸ್ ಬ್ಯಾಂಕ್ ಗೆ ರಿಸರ್ವ್ ಬ್ಯಾಂಕ್ ನಿರ್ಬಂಧ

ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್ ಮತ್ತು ಮಾಜಿ ಐಎಎಸ್ ಅಧಿಕಾರಿ ರಜನಿ ಸೆಖ್ರಿ ಸಿಬಲ್ ಅವರನ್ನೊಳಗೊಂಡ ನಿರ್ದೇಶಕ ಮಂಡಳಿಯನ್ನು ರಚಿಸಲಾಗಿದೆ ಎಂದು ಪೇಟಿಎಂ ಸೋಮವಾರ ಷೇರು ಪೇಟೆಗೆ ಮಾಹಿತಿ ನೀಡಿದೆ.

"ವಿಜಯ್ ಶೇಖರ್ ಶರ್ಮಾ ಅವರು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನಿರ್ದೇಶಕ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ನೇಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ PPB" ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com