ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ GDP ವೃದ್ಧಿ; ಶೇ. 8.4 ರಷ್ಟು ಬೆಳವಣಿಗೆ ದಾಖಲು

2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.
India's GDP growth is massive 8.4 % in Q3; FY24 growth upwardly revised at 7.6 %
India's GDP growth is massive 8.4 % in Q3; FY24 growth upwardly revised at 7.6 %

ನವದೆಹಲಿ: 2023-24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ(ಜಿಡಿಪಿ) ಎಲ್ಲರ ನಿರೀಕ್ಷೆಯನ್ನು ಮೀರಿ ಶೇ. 8.4 ರಷ್ಟು ಬೆಳವಣಿಗೆ ಸಾಧಿಸಿದೆ.

ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ದೇಶದ ಜಿಡಿಪಿ ಶೇ. 8.4ರಷ್ಟು ಬೆಳೆದಿದೆ.

ನಿನ್ನೆಯವರೆಗೂ ಹಲವು ಆರ್ಥಿಕ ತಜ್ಞರು ಈ ಕ್ವಾರ್ಟರ್​ನಲ್ಲಿ ಶೇ. 6ರಿಂದ 7ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿಬಹುದು ಎಂದು ಅಂದಾಜು ಮಾಡಿದ್ದರು. ಆರ್​ಬಿಐ ಮಾಡಿದ ಅಂದಾಜು ಕೂಡ ಶೇ. 7ರ ಆಸುಪಾಸು ಇತ್ತು. ಆದರೆ ಭಾರತದ ನೈಜ ಜಿಡಿಪಿ ವೃದ್ಧಿ ಈಗ ಎಲ್ಲರನ್ನೂ ಅಚ್ಚರಿಗೊಳಿಸುವಷ್ಟು ಹೆಚ್ಚಿನ ಮಟ್ಟದಲ್ಲಿ ಇದೆ.

India's GDP growth is massive 8.4 % in Q3; FY24 growth upwardly revised at 7.6 %
ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಭಾರತ: ಸ್ಥಾನ ಭದ್ರಪಡಿಸಿದ ಜಿಡಿಪಿ ಅಂಕಿಅಂಶ!

ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳೆದಿತ್ತು. ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6 ರಷ್ಟು ಬೆಳೆದಿದೆ. ಮೂರನೇ ಕ್ವಾರ್ಟರ್ ಇನ್ನೂ ಹೆಚ್ಚಿನ ಅಚ್ಚರಿ ಮೂಡಿಸಿದೆ. ಒಟ್ಟಾರೆ ಈ ಹಣಕಾಸು ವರ್ಷದ ಮೊದಲ ಮೂರು ಕ್ವಾರ್ಟರ್ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಸರಾಸರಿಯಾಗಿ ಶೇ. 7.93ರಷ್ಟು ಇದೆ. ಅಂದರೆ ಶೇ. 8ಕ್ಕೆ ಸಮೀಪ ಇದೆ.

2023-24ರ ಮೂರನೇ ಕ್ವಾರ್ಟರ್​ನಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ ಇದೆ. ಹಿಂದಿನ ವರ್ಷದ ಇದೇ ಕ್ವಾರ್ಟರ್​ನಲ್ಲಿ 40.35 ಲಕ್ಷ ಕೋಟಿ ರೂ ಇತ್ತು. ಈ ಬಾರಿ ಶೇ. 8.4ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com