ಮೋದಿ 3.0 ಗೆ ಷೇರು ಮಾರುಕಟ್ಟೆ ಪುಳಕ: ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕ ಏರಿಕೆ

30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಇಂದು ಬೆಳಗಿನ ಆರಂಭಿಕ ವಹಿವಾಟಿನಲ್ಲಿ 696.46 ಪಾಯಿಂಟ್‌ಗಳ ಜಿಗಿದು 75,078.70 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 179.15 ಪಾಯಿಂಟ್‌ ಏರಿಕೆ ಕಂಡು 22,799.50ಕ್ಕೆ ತಲುಪಿದೆ.
ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆ
ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆ
Updated on: 

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ನಾಯಕರು ನಿನ್ನೆ ಬುಧವಾರ ದೆಹಲಿಯಲ್ಲಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ನಂತರ, ಷೇರುಪೇಟೆ ಮಾರುಕಟ್ಟೆ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಇಂದು ಗುರುವಾರ ಪುಟಿದೆದ್ದಿದೆ. ಮೊನ್ನೆ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ದಿನ ಸೆನ್ಸೆಕ್ಸ್ ಪಾತಾಳಕ್ಕೆ ಕುಸಿದಿತ್ತು.

30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಇಂದು ಬೆಳಗಿನ ಆರಂಭಿಕ ವಹಿವಾಟಿನಲ್ಲಿ 696.46 ಪಾಯಿಂಟ್‌ಗಳ ಜಿಗಿದು 75,078.70 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 179.15 ಪಾಯಿಂಟ್‌ ಏರಿಕೆ ಕಂಡು 22,799.50ಕ್ಕೆ ತಲುಪಿದೆ.

ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟಗಳ ಸಭೆ
ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!

30 ಸೆನ್ಸೆಕ್ಸ್ ಕಂಪನಿಗಳಲ್ಲಿ, ಎನ್‌ಟಿಪಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪವರ್ ಗ್ರಿಡ್, ಟಾಟಾ ಸ್ಟೀಲ್, ಟೆಕ್ ಮಹೀಂದ್ರ ಮತ್ತು ಎಚ್‌ಸಿಎಲ್ ಟೆಕ್ನಾಲಜೀಸ್ ಅತಿ ಹೆಚ್ಚು ಲಾಭ ಗಳಿಸಿದವು. ಹಿಂದುಸ್ತಾನ್ ಯೂನಿಲಿವರ್, ನೆಸ್ಲೆ, ಸನ್ ಫಾರ್ಮಾ ಮತ್ತು ಏಷ್ಯನ್ ಪೇಂಟ್ಸ್ ಹಿಂದುಳಿದವು.

ಎನ್‌ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com