
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ನರೇಂದ್ರ ಮೋದಿ 3 ನೇ ಅವಧಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿದರು.
ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಇಂಡಿಯಾ ಐಎನ್ ಸಿ, ಮೋದಿಗೆ ಅಭಿನಂದನೆ ಸಲ್ಲಿಸಿದೆ. ಇದೇ ವೇಳೆ ವಿಕಸಿತ ಭಾರತಕ್ಕಾಗಿ ಅಡಿಪಾಯ ಹಾಕುವುದಕ್ಕೆ ಹಾಗೂ ದಿಟ್ಟ ಸುಧಾರಣೆಗಳು" ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಕ್ರಮಗಳನ್ನು ಎದುರು ನೋಡುತ್ತಿರುವುದಾಗಿ ಹೇಳಿದೆ.
"ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಜಿ ಅವರಿಗೆ ಅಭಿನಂದನೆಗಳು. ಹೊಸ ಅವಧಿಯು ಭಾರತದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಹತ್ವದ್ದಾಗಿದೆ ಎಂದು ಭಾವಿಸುತ್ತೇವೆ" ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವಿಟರ್ ನಲ್ಲಿ ಹೇಳಿದ್ದಾರೆ.
"ನೀವು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ವಿಶ್ವದ ಪ್ರಮುಖ ಆರ್ಥಿಕತೆಗಳ ನಡುವೆ ವೇಗದ ಬೆಳವಣಿಗೆಯನ್ನು ಕಾಯ್ದುಕೊಳ್ಳುವ ಮೂಲಕ ದೇಶದ ನಾಯಕತ್ವವು ಹೆಚ್ಚಿನ ಎತ್ತರಕ್ಕೆ ಸಾಗಲಿದೆ ಎಂಬ ವಿಶ್ವಾಸವಿದೆ" ಎಂದು ಅಸೋಚಾಮ್ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.
Advertisement