ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ, ಪರಿಷ್ಕೃತ ದರ ಇಂದಿನಿಂದ ಜಾರಿ

19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 25 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) ಇಂದು ಮಾರ್ಚ್ 1, ಶುಕ್ರವಾರದಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿವೆ.

ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್‌ನ ಚಿಲ್ಲರೆ ಬೆಲೆ 1,795 ರೂಪಾಯಿ ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749ಕ್ಕೆ ಮಾರಾಟವಾಗಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕ್ರಮವಾಗಿ 1,960 ರೂಪಾಯಿ ಮತ್ತು 1,911 ಕ್ಕೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸತತ ಎರಡನೇ ಬಾರಿಗೆ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಫೆಬ್ರವರಿ 1 ರಂದು, 19 ಕೆಜಿ ಗ್ಯಾಸ್ ಸಿಲಿಂಡರ್ ದರವು 14 ರಷ್ಟು ಹೆಚ್ಚಾಗಿತ್ತು.

ತೈಲ ಕಂಪನಿಗಳು ವಾಣಿಜ್ಯ ಬಳಕೆ ಸಿಲಿಂಡರ್ ದರಗಳನ್ನು 1 ಡಿಸೆಂಬರ್ 2023 ರಂದು ದೇಶದ ವಿವಿಧ ಸ್ಥಳಗಳಲ್ಲಿ 21 ರೂಪಾಯಿಗಳಷ್ಟು ಹೆಚ್ಚಿಸಿದ್ದವು. 2024 ರ ಹೊಸ ವರ್ಷದ ಮುನ್ನಾದಿನದಂದು, 19 ಕೆಜಿ ವಾಣಿಜ್ಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 39.50 ರಷ್ಟು ಕಡಿತಗೊಳಿಸಲಾಯಿತು.

ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಹಿಂದಿನ ತಿಂಗಳ ಸರಾಸರಿ ಅಂತಾರಾಷ್ಟ್ರೀಯ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com