ಪೆಟ್ರೋಲ್, ಡೀಸೆಲ್ ದರ ಇಳಿಕೆ ಬೆನ್ನಲ್ಲೇ ತೈಲ ಸಂಸ್ಥೆಗಳ ಷೇರುಮೌಲ್ಯ ಕುಸಿತ!
ಮುಂಬೈ: ಲೋಕಸಭಾ ಚುನಾವಣೆ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಿದ ಬೆನ್ನಲ್ಲೇ ದೇಶದ ಪ್ರಮುಖ ತೈಲ ಸಂಸ್ಥೆಗಳ ಷೇರುಗಳ ಮೌಲ್ಯ ಕುಸಿತಕಂಡಿದೆ.
ಹೌದು.. ತೈಲ ಮಾರುಕಟ್ಟೆ ಕಂಪನಿಗಳ (OMCs) ಷೇರುಗಳ ಮೌಲ್ಯ ಇಂದು ದಿಢೀರ್ ಕುಸಿತ ಕಂಡಿದ್ದು, ಪ್ರಮುಖವಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್, BPCL (ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್) ಮತ್ತು HPCL (ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್) ಸಂಸ್ಥೆಗಳ ಷೇರುಗಳ ಮೌಲ್ಯ ಕುಸಿತ ದಾಖಲಿಸಿದೆ.
ಮೂಲಗಳ ಪ್ರಕಾರ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಷೇರುಗಳು BSE ನಲ್ಲಿ ಶೇ. 8.10 ರಷ್ಟು ಇಳಿಕೆಯಾಗಿ ಪ್ರತೀ ಷೇರಿನ ಮೌಲ್ಯ 459.60 ರೂ.ಗೆ ಕುಸಿದಿದೆ. ಅಂತೆಯೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಷೇರುಗಳು ಶೇ 6.80 ರಷ್ಟು ಕುಸಿದು ಪ್ರತೀ ಷೇರಿನ ಮೌಲ್ಯ 158.40 ರೂ.ಗೆ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಶೇ 6.37 ರಷ್ಟು ಕುಸಿದು ಪ್ರತೀ ಷೇರಿನ ಮೌಸ್ಯ 570.20ರೂ ಗೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
ಸುಮಾರು ಎರಡು ವರ್ಷಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ ಪರಿಷ್ಕರಣೆಯಾಗಿದ್ದು, ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ ತಲಾ 2 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ