ಏಪ್ರಿಲ್‌ನಲ್ಲಿ ಸಗಟು ಹಣದುಬ್ಬರ ಶೇ.1.26ಕ್ಕೆ ಏರಿಕೆ!

ಇಂಧನ ಮತ್ತು ವಿದ್ಯುತ್, ಆಹಾರ ಪದಾರ್ಥಗಳು, ವಿಶೇಷವಾಗಿ ತರಕಾರಿಗಳ ಬೆಲೆ ಹೆಚ್ಚಳದಿಂದಾಗಿ ಏಪ್ರಿಲ್‌ನಲ್ಲಿ ಸಗಟು ಹಣದುಬ್ಬರವು ಶೇ 1.26 ಕ್ಕೆ ಏರಿಕೆಯಾಗಿದೆ. ಕಳೆದ ಮಾರ್ಚ್‌ನಲ್ಲೂ ಸಗಟು ಹಣದುಬ್ಬರವು ಏರಿಕೆಯಾಗಿತ್ತು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ಇಂಧನ ಮತ್ತು ವಿದ್ಯುತ್, ಆಹಾರ ಪದಾರ್ಥಗಳು, ವಿಶೇಷವಾಗಿ ತರಕಾರಿಗಳ ಬೆಲೆ ಹೆಚ್ಚಳದಿಂದಾಗಿ ಏಪ್ರಿಲ್‌ನಲ್ಲಿ ಸಗಟು ಹಣದುಬ್ಬರವು ಶೇ 1.26 ಕ್ಕೆ ಏರಿಕೆಯಾಗಿದೆ. ಕಳೆದ ಮಾರ್ಚ್‌ನಲ್ಲೂ ಸಗಟು ಹಣದುಬ್ಬರವು ಏರಿಕೆಯಾಗಿತ್ತು.

ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧರಿತ ಹಣದುಬ್ಬರವು ಕಳೆದ ವರ್ಷ ಏಪ್ರಿಲ್‌ನಲ್ಲಿ ಶೇ 0.79 ರಷ್ಟಿತ್ತು. 2024 ರ ಮಾರ್ಚ್‌ನಲ್ಲಿ, ಇದು ಶೇ 0.53 ರಷ್ಟಿತ್ತು.

'ಆಹಾರ ಪದಾರ್ಥಗಳು, ವಿದ್ಯುತ್, ಕಚ್ಚಾ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಆಹಾರ ಉತ್ಪನ್ನಗಳ ತಯಾರಿಕೆ, ಇತರ ಉತ್ಪಾದನೆಗಳ ಬೆಲೆಗಳಲ್ಲಿ ಹೆಚ್ಚಳವಾಗಿರುವುದರಿಂದ 2024ರ ಏಪ್ರಿಲ್‌ನಲ್ಲಿ ಹಣದುಬ್ಬರದ ಧನಾತ್ಮಕ ದರವು ಪ್ರಾಥಮಿಕವಾಗಿ ಏರಿಕೆಯಾಗಿದೆ' ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಮಾಹಿತಿಯ ಪ್ರಕಾರ, ಮಾರ್ಚ್‌ನಲ್ಲಿ ಶೇ 6.88 ರಷ್ಟಿದ್ದ ಆಹಾರ ಪದಾರ್ಥಗಳ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ 7.74 ಕ್ಕೆ ಏರಿದೆ. ತರಕಾರಿಗಳ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ 23.60 ರಷ್ಟಿದ್ದು, ಹಿಂದಿನ ತಿಂಗಳು ಶೇ 19.52 ರಷ್ಟಿತ್ತು. ಇಂಧನ ಮತ್ತು ವಿದ್ಯುತ್ ಹಣದುಬ್ಬರವು ಏಪ್ರಿಲ್‌ನಲ್ಲಿ 1.38 ರಷ್ಟಿದ್ದು, ಮಾರ್ಚ್‌ನಲ್ಲಿ (-) 0.77 ರಷ್ಟಿತ್ತು.

ಪ್ರಾತಿನಿಧಿಕ ಚಿತ್ರ
ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ ಸೂಚ್ಯಂಕ ಹಣದುಬ್ಬರ ಶೇ. 1.34ಕ್ಕೆ ಕುಸಿತ; ಕಳೆದ 29 ತಿಂಗಳಲ್ಲೇ ಅತಿಕಡಿಮೆ!

ಏಪ್ರಿಲ್‌ನಲ್ಲಿ ಡಬ್ಲ್ಯುಪಿಐ ಏರಿಕೆಯು ಚಿಲ್ಲರೆ ಹಣದುಬ್ಬರದ ದತ್ತಾಂಶಕ್ಕೆ ವ್ಯತಿರಿಕ್ತವಾಗಿದೆ. ವಿತ್ತೀಯ ನೀತಿಯನ್ನು ರೂಪಿಸುವಾಗ ಆರ್‌ಬಿಐ ಮುಖ್ಯವಾಗಿ ಚಿಲ್ಲರೆ ಹಣದುಬ್ಬರವನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಚಿಲ್ಲರೆ ಹಣದುಬ್ಬರವು ಏಪ್ರಿಲ್‌ನಲ್ಲಿ 11 ತಿಂಗಳ ಕನಿಷ್ಠ ಮಟ್ಟ ಅಂದರೆ ಶೇ 4.83 ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com