ಮುಂಬೈ: ಭಾರತೀಯ ಷೇರುಮಾರುಕಟ್ಟೆ ಇಂದು ಮತ್ತೆ ಅಲ್ಪ ಪ್ರಮಾಣದ ಕುಸಿತ ಕಂಡಿದ್ದು, ಸೆನ್ಸೆಕ್ಸ್ 55.47 ಅಂಕ ಇಳಿಕೆ ಕಂಡಿದೆ.
ನಿನ್ನೆ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಮತ್ತೆ ಅಲ್ಪ ಪ್ರಮಾಣದಲ್ಲಿ ಕುಸಿದು ದಿನದ ವಹಿವಾಟು ಅಂತ್ಯಗೊಳಿಸಿದೆ.
ಸೆನ್ಸೆಕ್ಸ್55.47 ಅಂಕಗಳಷ್ಟು ಕುಸಿದು 79,486.32 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಅಂತೆಯೇ ನಿಫ್ಟಿ ಕೂಡ 51.15 ಅಂಕ ಕುಸಿದು 24,148.20 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟಾರೆ ಶೇ.0.070ರಷ್ಟು ಮತ್ತು ನಿಫ್ಟಿ ಶೇ.0.21ರಷ್ಟು ಕುಸಿತಗೊಂಡಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿಮಾಡಲಾದ ಸಂಸ್ಥೆಗಳ ಪೈಕಿ ಕೋಲ್ ಇಂಡಿಯಾ, ಟಾಟಾ ಸ್ಟೀಲ್, ಟ್ರೆಂಟ್, ಏಷ್ಯನ್ ಪೇಂಟ್ಸ್ ಮತ್ತು ಶ್ರೀರಾಮ್ ಫೈನಾನ್ಸ್ ನಷ್ಟ ಅನುಭವಿಸಿದ್ದು, ಟೆಕ್ ಮಹೀಂದ್ರಾ, ಇನ್ಫೋಸಿಸ್ ಮತ್ತು ನೆಸ್ಲೆ ಸಂಸ್ಥೆಗಳು ಲಾಭಾಂಶ ಕಂಡಿದೆ.
Advertisement