
ಮುಂಬೈ: ಇಂದು ಅಕ್ಟೋಬರ್ 1 ತಿಂಗಳ ಆರಂಭದಲ್ಲಿ ದಸರಾ ಹಬ್ಬಕ್ಕೆ ಮುನ್ನ ಹಣದುಬ್ಬರದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು49 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ. ಕಂಪೆನಿಗಳು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿನಂತೆ ದೆಹಲಿಯಲ್ಲಿ 803 ರೂಪಾಯಿಗೆ ಲಭ್ಯವಿರುತ್ತದೆ.
ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 48.50 ರೂಪಾಯಿ ಬೆಲೆ ಏರಿಕೆ ಕಂಡುಬಂದಿದ್ದು 1,818 ರೂಪಾಯಿಗೆ ತಲುಪಿದೆ. ಬೆಲೆ ಪರಿಷ್ಕರಣೆಗೂ ಮೊದಲು ಬೆಲೆಯು 19 KG ಪ್ರತಿ ಸಿಲಿಂಡರ್‌ಗೆ 1,769.50 ರೂಪಾಯಿಗಳಷ್ಟಿತ್ತು.
ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಇಂದು ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಾಗಿದೆ. ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿಗೆ ಮುನ್ನವೇ ಹಣದುಬ್ಬರದಿಂದ ಗ್ರಾಹಕರು ತತ್ತರಿಸಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 50 ರೂಪಾಯಿ ಹೆಚ್ಚಿಸಲಾಗಿದ್ದು, ಇಂದಿನಿಂದ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 1740 ರೂಪಾಯಿ ಆಗಿದೆ. ಈ ದರ ಇಂಡೇನ್ ಸಿಲಿಂಡರ್ ಆಗಿದೆ. ಇಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಇತ್ತೀಚಿನ ದರದ ಪ್ರಕಾರ, ಅಕ್ಟೋಬರ್ 1, 2024ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬೈನಲ್ಲಿ 1692.50 ರೂಪಾಯಿ, ಕೋಲ್ಕತ್ತಾದಲ್ಲಿ 1850.50 ರೂಪಾಯಿ ಮತ್ತು ಚೆನ್ನೈನಲ್ಲಿ 1903 ರೂಪಾಯಿ ಆಗಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಸಹ ಎಲ್‌ಪಿಜಿ ಸಿಲಿಂಡರ್ ದರ ಸುಮಾರು 39 ರೂಪಾಯಿ ಏರಿಕೆಯಾಗಿ 1691.50 ರೂಪಾಯಿಗೆ ತಲುಪಿತ್ತು.
ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಧಾಬಾಗಳ ಆಹಾರ ದರಗಳ ಮೇಲೆ ಪರಿಣಾಮ ಬೀರಬಹುದು. ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳನ್ನು ಈ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಬಳಸಲಾಗುತ್ತದೆ. ಕಳೆದ ಸೆಪ್ಟೆಂಬರ್ ಮತ್ತು ಆಗಸ್ಟ್‌ನಲ್ಲಿಯೂ ಬೆಲೆ ಏರಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ 39 ರೂಪಾಯಿ, ಆಗಸ್ಟ್ ನಲ್ಲಿ 8-9 ರೂಪಾಯಿ ಏರಿಕೆಯಾಗಿತ್ತು.
Advertisement