
ಮುಂಬೈ: ಸತತ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಸತತ 5 ದಿನಗಳ ಕುಸಿತ ಬಳಿಕ ಇಂದು ಅಂದರೆ ವಾರದ ಮೊದಲ ದಿನವೇ ಭರ್ಜರಿ ಚೇತರಿಕೆ ಕಂಡಿದೆ.
ಹೌದು.. ಕಳೆದ ವಾರವಿಡೀ ಕುಸಿತದಲ್ಲೇ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 602.75 ಅಂಕಗಳ ಏರಿಕೆಯೊಂದಿಗೆ 80,005.04 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಅಂತೆಯೇ ನಿಫ್ಟಿ ಕೂಡ 158.35 ಅಂಕಗಳ ಏರಿಕೆಯೊಂದಿಗೆ 24,339.15 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಇಂದು ಭಾರತೀಯ ಷೇರುಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಶೇ.0.76ರಷ್ಟು ಏರಿಕೆಯಾಗಿದ್ದು, ನಿಫ್ಟಿ ಸೂಚ್ಯಂಕ ಕೂಡ ಶೇ.0.65ರಷ್ಟು ಏರಿಕೆ ಕಂಡಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿಮಾಡಲಾದ ಸಂಸ್ಥೆಗಳ ಪೈಕಿ ICICI ಬ್ಯಾಂಕ್, ಅದಾನಿ ಪೋರ್ಟ್ಸ್, JSW ಸ್ಟೀಲ್, ಟಾಟಾ ಸ್ಟೀಲ್, M&M, ಸನ್ ಫಾರ್ಮಾ ಸಂಸ್ಥೆಗಳು ಲಾಭಾಂಶ ಕಂಡಿದ್ದು, ಅಂತೆಯೇ ಆಕ್ಸಿಸ್ ಬ್ಯಾಂಕ್, ಕೊಟಕ್ ಬ್ಯಾಂಕ್, ಟೆಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಮಾರುತಿ ಮತ್ತು ಏರ್‌ಟೆಲ್ ಸಂಸ್ಥೆಗಳ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.
Advertisement