Indian Stock Market: ಸತತ 2ನೇ ದಿನವೂ ವಹಿವಾಟು ಚೇತರಿಕೆ; ಸೆನ್ಸೆಕ್ಸ್ 363 ಅಂಕ ಏರಿಕೆ

ಇಂದೂ ಕೂಡ ಭಾರತೀಯ ಷೇರುಮಾರುಕಟ್ಟೆ ಹಸಿರಿನಲ್ಲೇ ವಹಿವಾಟು ಅಂತ್ಯಗೊಳಿಸಿದೆ. ಇಂದು ಸೆನ್ಸೆಕ್ಸ್ 363.99 ಅಂಕಗಳ ಏರಿಕೆಯೊಂದಿಗೆ 80,369.03 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ.
Indian Stock Market
ಭಾರತೀಯ ಷೇರುಮಾರುಕಟ್ಟೆ
Updated on: 

ಮುಂಬೈ: ಸತತ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಸತತ 2 ದಿನವೂ ಚೇತೋಹಾರಿ ವಹಿವಾಟು ನಡೆಸಿದ್ದು, ಇಂದು ಸೆನ್ಸೆಕ್ಸ್ 363 ಅಂಕ ಏರಿಕೆಯಾಗಿದೆ.

ಹೌದು.. ಕಳೆದ ವಾರವಿಡೀ ಕುಸಿತದಲ್ಲೇ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ನಿನ್ನೆಯಿಂದ ಏರಿಕೆಯತ್ತ ಮುಖ ಮಾಡಿದ್ದು, ಇಂದೂ ಕೂಡ ಭಾರತೀಯ ಷೇರುಮಾರುಕಟ್ಟೆ ಹಸಿರಿನಲ್ಲೇ ವಹಿವಾಟು ಅಂತ್ಯಗೊಳಿಸಿದೆ.

Indian Stock Market
Indian Stock Market: ಸತತ 5 ದಿನಗಳ ಕುಸಿತ ಕೊನೆಗೂ ಅಂತ್ಯ; ಸೆನ್ಸೆಕ್ಸ್ 602.75 ಅಂಕ ಏರಿಕೆ

ಇಂದು ಸೆನ್ಸೆಕ್ಸ್ 363.99 ಅಂಕಗಳ ಏರಿಕೆಯೊಂದಿಗೆ 80,369.03 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಅಂತೆಯೇ ನಿಫ್ಟಿ ಕೂಡ 127.70 ಅಂಕಗಳ ಏರಿಕೆಯೊಂದಿಗೆ 24,466.85 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಇಂದು ಭಾರತೀಯ ಷೇರುಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಶೇ.0.45ರಷ್ಟು ಏರಿಕೆಯಾಗಿದ್ದು, ನಿಫ್ಟಿ ಸೂಚ್ಯಂಕ ಕೂಡ ಶೇ.0.52ರಷ್ಟು ಏರಿಕೆ ಕಂಡಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿಮಾಡಲಾದ ಸಂಸ್ಥೆಗಳ ಪೈಕಿ ಎಲ್&ಟಿ ಟೆಕ್ನಾಲಜಿ ಸರ್ವಿಸಸ್ ಲಿಮಿಟೆಡ್, ವಿಪ್ರೋ, ಕೋಫೋರ್ಜ್, ಎಂಫಾಸಿಸ್, ಪರ್ಸಿಸ್ಟೆಂಟ್ ಸಿಸ್ಟಮ್ಸ್ ಸಂಸ್ಥೆಗಳು ಲಾಭಾಂಶ ಕಂಡಿದ್ದು, ಅಂತೆಯೇ ಇನ್ಫೋಸಿಸ್, LTIMindtree, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟೆಕ್ ಮಹೀಂದ್ರ ಸಂಸ್ಥೆಗಳ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com