
ನವದೆಹಲಿ: ಸುಂಕ ಸಮರದ ನಡುವೆ ಹಳದಿ ಲೋಹದ ಬೆಲೆ ಗಗನಕ್ಕೇರಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಭಾರೀ ಬೇಡಿಕೆಯಿಂದಾಗಿ ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 6,250 ರೂಪಾಯಿಗಳಷ್ಟು ಏರಿಕೆಯಾಗಿದ್ದು, 10 ಗ್ರಾಂ ಬೆಲೆ ರೂ. 96,450 ಗೆ ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ ಶುದ್ದ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 9,540 ಹಾಗೂ 10 ಗ್ರಾಂಗೆ ರೂ. 95,400 ಆಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 8,745, 10 ಗ್ರಾಂಗೆ ರೂ. 87,450 ಮತ್ತು 18 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ರೂ, 7,155 ಮತ್ತು 10 ಗ್ರಾಂಗೆ ರೂ. 71,550 ಆಗಿದೆ.
ಅಮೇರಿಕಾ-ಚೀನಾದ ನಡುವೆ ಸುಂಕ ಸಮರ ಹೆಚ್ಚುತ್ತಿರುವಂತೆಯೇ, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೇಡಿಕೆ ಹೆಚ್ಚಿರುವುದು ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಮಂಗಳವಾರ 10 ಗ್ರಾಂ ಚಿನ್ನದ ಬೆಲೆಯು ರೂ. 89,750 ಇದದ್ದು, ಬುಧವಾರ ರೂ. 96,000 ಕ್ಕೆ ತಲುಪಿತ್ತು. ಬೆಳ್ಳಿಯ ಬೆಲೆಯೂ ಹೆಚ್ಚಾಗಿದ್ದು, ಪ್ರತಿ ಕೆಜಿಗೆ ರೂ 2,300 ರಿಂದ ರೂ 95,500 ರವರೆಗೂ ಏರಿಕೆಯಾಗಿದೆ.
Advertisement