
ಮುಂಬೈ: ನಿನ್ನೆಯಷ್ಟ ಭಾರಿ ಏರಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಮತ್ತೆ ಕುಸಿತಕಂಡಿದ್ದು, ಮಂಗಳವಾರ ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಇಳಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.46ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.40ರಷ್ಟು ಕುಸಿತ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 368.48ಅಂಕಗಳ ಇಳಿಕೆಯೊಂದಿಗೆ 80,235.59 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 97.65 ಅಂಕಗಳ ಇಳಿಕೆಯೊಂದಿಗೆ 24,487.40 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಇಂಧನ, ಆಟೋ, ಗ್ಯಾಸ್ ವಲಯದ ಷೇರುಗಳು ಉತ್ತಮ ವಹಿವಾಟು ನಡೆಸಿದ್ದರೆ, ರಿಯಾಲಿಟಿ ಮತ್ತು ಬ್ಯಾಂಕಿಂಗ್ ವಲಯದ ಷೇರುಗಳು ನಷ್ಟ ಅನುಭವಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಬಜಾಜ್ ಫೈನಾನ್ಸ್, ಟ್ರೆಂಟ್, ಹಿಂದೂಸ್ತಾನ್ ಯೂನಿಲಿವರ್, HDFC ಬ್ಯಾಂಕ್, ಎಟರ್ನಲ್, ಬಜಾಜ್ ಫಿನ್‌ಸರ್ವ್, ICICI ಬ್ಯಾಂಕ್, ಬಜಾಜ್ ಫೈನಾನ್ಸ್, HUL, ಟ್ರೆಂಟ್, ನೆಸ್ಲೆ ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿದೆ.
ಅಂತೆಯೇ ಟೆಕ್ ಮಹೀಂದ್ರಾ, ಮಾರುತಿ ಸುಜುಕಿ, ಹೀರೋ ಮೋಟೋಕಾರ್ಪ್, M&M, NTCP ಮತ್ತು ಮಾರುತಿ ಸುಜುಕಿ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿವೆ.
Advertisement